ಕುಣಿಗಲ್ ತಾಲ್ಲೂಕಿನ ಅಂಚೆಪಾಳ್ಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಮಾಜಿ ಸಂಸದ ಎಸ್ಪಿ ಮುದ್ದಹನುಮೇಗೌಡ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಭಾಗ್ಯಮ್ಮ ಹಾಗೂ ಪತಿ ಕೆಂಪಿರೇಗೌಡ ಪುರಸಭಾ ಮಾಜಿ ಅಧ್ಯಕ್ಷ ನಳಿನಾ ಭೈರಪ್ಪ ಹಾಗೂ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಕೆಂಪೇಗೌಡ ವಕೀಲ ಶಿವಶಂಕರ್ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಬಿಜೆಪಿ ಪಕ್ಷಕ್ಕೆ ಇದೆ ವೇಳೆ ಸೇರ್ಪಡೆಯಾದರು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೃಹತ್ ಮಟ್ಟದಲ್ಲಿ ಮಾಜಿ ಸಂಸದರನ್ನು ಬೆಂಬಲಿಸಿ ಪಕ್ಷ ಸೇರ್ಪಡೆಯಾಗಿರುವುದು ಕೈ ಪಾಳಯಕ್ಕೆ ಬಾರಿ ಹೊಡೆತ ಬಿದ್ದಂತಾಗಿದೆ
ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾದ ಬಳಿಕ ಮಾಜಿ ಸಂಸದ ಎಸ್.ಪಿ ಮುದ್ದಹನುಮೆಗೌಡ ಸದ್ದಿಲ್ಲದಂತೆ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಹಾಗೂ ಕಿರಿಯ ಮುಖಂಡರನ್ನು ಸೇರಿದಂತೆ ಹಲವರನ್ನು ಬಿಜೆಪಿಗೆ ಕರೆತರುವ ಮೂಲಕ ಹಾಲಿ ಶಾಸಕರ ನಿದ್ದೆಗೆಡಿಸಿದ್ದಾರೆ,ಹಾಗೂ ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ತಾಲೂಕಿನ ಕಾಂಗ್ರೆಸ್ ಮುಖಂಡರು ಸೇರಲಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಡಿ.ಕೆ ಬ್ರದರ್ಸ್ ಗೆ ಕುಟುಕಿದ್ದಾರೆ,
ಈ ವೇಳೆ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ ಸುರೇಶ್ ಜೊತೆಗೆ ಡಾ.ಜಿ ಪರಮೇಶ್ವರ್ ಕೂಡ ಪಿತೂರಿ ನಡೆಸಿ ನನ್ನನ್ನು ಎರಡನೇ ಸಲ ಸಂಸತ್ ಸದಸ್ಯನಾಗದಂತೆ ತಡೆದರು ಎಂದು ಮಾಜಿ ಸಂಸದ ಎಸ್.ಪಿ.ಎಮ್ ಹೊಸ ಬಾಂಬ್ ಸಿಡಿಸಿದ್ದಾರೆ ಕುಣಿಗಲ್ ನ ಅಂಚೆಪಾಳ್ಯ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನನ್ನನ್ನು ರಾಜಕೀಯವಾಗಿ ಮುಗಿಸುವ ಸಲುವಾಗಿ ದೇವೇಗೌಡರನ್ನು ಬಲವಂತವಾಗಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಡಿದರು ಸಂಸದ ಡಿ.ಕೆ ಸುರೇಶ್ ನನ್ನ ಮನೆಗೆ ಬಂದು ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಬಲವಂತ ಮಾಡಿದ್ದರು
ಒಕ್ಕಲಿಗ ಸಮುದಾಯದ ಮತ್ತೊಬ್ಬ ನಾಯಕ ಎರಡನೇ ಬಾರಿಗೆ ಸಂಸತ್ ಸದಸ್ಯನಾಗಿ ಹೋದರೆ ರಾಜಕೀಯವಾಗಿ ಪ್ರಭಾವಿ ಆಗಬಹುದು ಎಂಬ ದುರುದ್ದೇಶದಿಂದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರೊಂದಿಗೆ ಸೇರಿ ಉದ್ದೇಶಪೂರ್ವಕವಾಗಿ ಡಿ.ಕೆ ಸಹೋದರರು ಕಾಂಗ್ರೆಸ್ ನಿಂದ ಟಿಕೆಟ್ ತಪ್ಪಿಸಿದರು ಈ ಬಗ್ಗೆ ಸಾರ್ವಜನಿಕವಾಗಿ ಎಲ್ಲಿ ಬೇಕಾದರೂ ಪ್ರಮಾಣ ಮಾಡಲು ಸಿದ್ಧನಿದ್ದೆನೆ ಎಂದು ನೇರವಾಗಿ ಡಿ.ಕೆ ಸಹೋದರಿಗೆ ನೇರವಾಗಿ ಸವಾಲೆಸೆದರು ನಿಮ್ಮ ಕುಟುಂಬದ ಸದಸ್ಯರೆಲ್ಲರಿಗೂ ಅಧಿಕಾರ ಬೇಕು ಆದರೆ ನಾನು ಮಾತ್ರ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಬಾರದು ನಾನು ಕಾಂಗ್ರೆಸ್ ನಲ್ಲಿದ್ದಾಗಲೇ ಯಡಿಯೂರಿನ ಕಾರ್ಯಕ್ರಮ ಒಂದರಲ್ಲಿ ನಾನು ಇರುವ ವರೆಗೆ ಕುಣಿಗಲ್ ನಲ್ಲಿ ಡಾ,ರಂಗನಾಥ್ ಟಿಕೆಟ್ ಎಂದು ಮಾತನಾಡಿದ ಸಂಸದ ಡಿಕೆ ಸುರೇಶ್ ಗೆ ಕುಣಿಗಲ್ ನಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಪಾಠ ಕಲಿಸುವೆ
ಒಕ್ಕಲಿಗ ಸಮುದಾಯದ ಹಿರಿಯರಾದ ಎಚ್ ಡಿ ದೇವೇಗೌಡರು ನನಗೆ ಟಿಕೆಟ್ ಬಿಟ್ಟು ಕೊಡಬೇಕಿತ್ತು ಅವರು ಹೇಳುತ್ತಾರೆ ಎಂದು ನಾನು ಕೊನೆಯವರೆಗೂ ಕಾದೆ ಆದರೆ ಅವರಿಗೂ ಅಂತಹ ದೊಡ್ಡ ಗುಣ ಬರಲೇ ಇಲ್ಲ ಅವರನ್ನು ಇದೇ ಕಾಂಗ್ರೆಸ್ ಮುಖಂಡರು ಕರೆತಂದು ವ್ಯವಸ್ಥಿತವಾಗಿ ಸೋಲಿಸಿ ಮಾಜಿ ಪ್ರಧಾನಿಯವರಿಗೆ ಅಪಮಾನ ಮಾಡಿದ ಕೀರ್ತಿ ಕಾಂಗ್ರೆಸ್ ನಾಯಕರಿಗೆ ಸಲ್ಲುತ್ತದೆ ಇನ್ನು ಜಿಲ್ಲೆಯಾದ್ಯಂತ ಬಿಜೆಪಿ ಪಕ್ಷದ ಶಾಸಕರನ್ನು ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸುವ ಜವಾಬ್ದಾರಿಯೂ ಕೂಡ ನಮ್ಮ ಮೇಲಿದ್ದು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸಭೆಗೆ ಕಳಿಸಲಾಗುವುದು ಡಿ.ಕೆ ಸಹೋದರರು ಮಾಡಿರುವ ಅನ್ಯಾಯವನ್ನು ಕುಣಿಗಲ್ ತಾಲ್ಲೂಕಿನ ಜನರು ಎಂದಿಗೂ ಮರೆಯುವುದಿಲ್ಲ
ಬಿಜೆಪಿ ಪಕ್ಷಕ್ಕೆ ನಾನು ಸೇರ್ಪಡೆಯಾದ ಬಳಿಕ ಪಕ್ಷ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರೆ ಅಭ್ಯರ್ಥಿಯಾದರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವೆವು ಎಂದರು ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ವೈ.ಹೆಚ್ ಹುಚ್ಚಯ್ಯ ಕುಣಿಗಲ್ ಹುಟ್ಟು ಹೊರಾಟಗಾರರನ್ನ ಕೊಡುಗೆ ಕೊಟ್ಟ ತಾಲ್ಲೂಕು ಆದರೆ ಕಾಂಗ್ರೆಸ್ ಶಾಸಕರು ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಆದರೆ ಕಾಂಗ್ರೆಸ್ ಮನೆಯನ್ನು ಮಾಜಿ ಸಂಸದ ಎಸ್.ಪಿ ಮುದ್ದಹನುಮೇಗೌಡ ರವರು ಸಾರಿಸಿ ಗುಡಿಸಿ ರಂಗೋಲಿ ಹಾಕಿ ಬಂದಿದ್ದಾರೆ ತಾಲೂಕಿನಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮವಾಗಿ ಮುದ್ದಹನುಮೇಗೌಡರು ಬಿಜೆಪಿ ಪಕ್ಷಕ್ಕೆ ಬಂದ ಬಳಿಕ ತಾಲೂಕಿನಲ್ಲಿ ಕಾಂಗ್ರೆಸ್ನ ಶಕ್ತಿ ಕುಂದಿದ್ದು ಕೆಲವೇ ದಿನಗಳಲ್ಲಿ ಕುಣಿಗಲ್ ನಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕರಾಗಿ ಆಯ್ಕೆಯಾಗಲಿದ್ದಾರೆ ಒಬ್ಬ ಸಜ್ಜನ ರಾಜಕಾರಣಿ ಜಿಲ್ಲೆಗೆ ಕೀರ್ತಿ ತಂದ ಮಾಜಿ ಸಂಸದರಿಗೆ ಕಾಂಗ್ರೆಸ್ ಪಕ್ಷ ಯಾವ ರೀತಿಯಲ್ಲಿ ನಡೆಸಿಕೊಂಡಿದೆ ಎಂಬುದು ತಾಲ್ಲೂಕಿನ ಜನತೆಗೆ ತಿಳಿದಿದೆ ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮೂರು ಜನ ನಾಯಕರು ತಾಲೂಕಿನಲ್ಲಿ ಶ್ರಮಿಸಲಿದ್ದಾರೆ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಂದೀಶ್,ಮಾಜಿ ಶಾಸಕ ಬಿ.ಸುರೇಶ ಗೌಡ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ವೈ.ಹೆಚ್ ಹುಚ್ಚಯ್ಯ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಲರಾಮ ಹಾಗೂ ಮುಖಂಡರಾದ ಎಚ್.ಡಿ ರಾಜೇಶ್ ಗೌಡ,ಹರ್ಷವರ್ಧನ್ ಗೌಡ ಸೇರಿದಂತೆ ಹಲವು ಮಂದಿ ಬಿಜೆಪಿ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು