ಕುಣಿಗಲ್ ತಾಲ್ಲೂಕಿನ ಗೋಕುಲ ಗ್ರಾಮದ ದಿವಂಗತ ವೈ,ಕೆ ರಾಮಯ್ಯನವರ ತೋಟದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮ ರೂಪಿಸಿ ಮಹಿಳೆಯರಿಗೆ ಹಂಚಲು ತಂದಿದ್ದರು ಎನ್ನಲಾ ಸುಮಾರು 90 ಸೀರೆಗಳನ್ನು ಹಾಗೂ ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಸುಮಾರು 150 ಕ್ಕೂ ಹೆಚ್ಚು ಕುರ್ಚಿಗಳನ್ನು ತಾಲ್ಲೂಕು ಸಹಾಯಕ ಚುನಾವಣಾ ಅಧಿಕಾರಿಗಳು
ಗುರುವಾರ ರಾತ್ರಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ ಗೋಕುಲ ಗ್ರಾಮದ ವೈ,ಕೆ,ಆರ್ ತೋಟದಲ್ಲಿ ಕಾಂಗ್ರೆಸ್ ಮುಖಂಡರು ನೂರಾರು ಮಹಿಳೆಯರನ್ನು ಸೇರಿಸಿ ಕಾರ್ಯಕ್ರಮ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ತಹಶೀಲ್ದಾರ್ ಮಹಾಬಲೇಶ್ವರ್ ಹಾಗೂ ಸಿಪಿಐ ಗುರುಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿ ಕಾಂಗ್ರೆಸ್ ಮುಖಂಡರ ಕಾರಿನಲ್ಲಿದ್ದ ಸೀರೆಗಳು ಹಾಗೂ ಕಾರ್ಯಕ್ರಮಕ್ಕೆ ಹಾಕಲಾಗಿದ್ದ 150 ಕ್ಕೂ ಹೆಚ್ಚು ಕುರ್ಚಿಗಳನ್ನು ವಶಕ್ಕೆ ಪಡೆಯಾಲಾಗಿದ್ದು
ಪ್ರಕರಣ ದಾಖಲಿಸಲು ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಮಹಾಬಲೇಶ್ವರ್ ತಿಳಿಸಿದ್ದು, ಇನ್ನೂ ಕಾರ್ಯಕ್ರಮದಲ್ಲಿ ಸೀರೆ ಹಂಚಲು ಬಂದಿದ್ದ ಶಾಸಕರು ಅಧಿಕಾರಿಗಳು ಬರುವ ಮಾಹಿತಿ ತಿಳಿದು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರು ಆರೋಪಿಸಿದ್ದಾರೆ