ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

Spread the love

ಕುಣಿಗಲ್ ಬ್ರೇಕಿಂಗ್/breaking…

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33 ಕಂಪ್ಲಾಪುರ ಗ್ರಾಮದ ಬಳಿ ಶನಿವಾರ ರಾತ್ರಿ 8 ಗಂಟೆಯ ಸಮಯದಲ್ಲಿ ನಡೆದಿದೆ

ಹುಲಿಯೂರುದುರ್ಗ ನಿವಾಸಿ ಸುರೇಶ್ (ಕ್ಯಾಪ್ಟನ್ ಸೂರಿ)(40), ಕೊಲೆಯಾದ ರೌಡಿಶೀಟರ್.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಕಾರ್ ನಲ್ಲಿ ತೆರಳುವ ವೇಳೆ ಮಾರಕಾಸ್ತ್ರಗಳನ್ನು ಹಿಡಿದು ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಸೂರಿ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ

ಮೃತ ವ್ಯಕ್ತಿ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಎಂದು ತಿಳಿದು ಬಂದಿದೆ ಕೆವಲ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾದ ಬಳಿಕ ಕುಟುಂಬದವರೊಂದಿಗೆ ಹುಲಿಯೂರುದುರ್ಗ ಪಟ್ಟಣದಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ

ಶನಿವಾರ ಹುಲಿಯೂರುದುರ್ಗ ಬೈ ಪಾಸ್ ನಲ್ಲಿ ತನ್ನ ಸ್ವೀಪ್ಟ್ ಕಾರಿನಲ್ಲಿ ತೆರಳುತ್ತಿದ್ದ ಸೂರಿ ಅಲಿಯಾಸ್ (ಕ್ಯಾಪ್ಟನ್ ಸೂರಿ)

ಈ ವೇಳೆ ಕಾರಿನಲ್ಲಿ ಮುಂದೆಯಿಂದ ಬಂದು ಕಾರಿಗೆ ಡಿಕ್ಕಿ ಹೊಡೆದಿರುವ ದುಷ್ಕಮಿಗಳು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಅಟ್ಯಾಕ್ ಮಾಡಿ,ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಆರೋಪಿಗಳು ಪರಾರಿಯಾಗಿದ್ದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್,ಎಎಸ್ಪಿ ಮರಿಯಪ್ಪ,ಕುಣಿಗಲ್ ಡಿವೈಎಸ್ಪಿ ಲಕ್ಷ್ಮಿಕಾಂತ,ಸಿಪಿಐ ನವಿನ್ ಗೌಡ,ಪಿಎಸ್ಐ ಬಾಲಕುಮಾರ್,ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಭೇಟಿ,ನೀಡಿ ಪರಿಶೀಲನೆ.ನಡೆಸಿದ್ದು ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ @publicnewskunigal