ಕುಣಿಗಲ್;- ಪಟ್ಟಣದಲ್ಲಿ ಮಾರ್ಚ್ ೧ರಂದು ನಡೆಯಲಿರುವ ಲಿಂಕ್ ಕೆನಾಲ್ ಯೋಜನೆಗೆ ಶಂಕುಸ್ಥಾಪನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಸಮಾವೇಶದ ಪೂರ್ವಭಾವಿ ಸಿದ್ದತೆಗಳನ್ನು ಪರಿಶೀಲಿಸಿದ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್!
ಕುಣಿಗಲ್ ಪಟ್ಟಣದ ಜಿ,ಕೆ,ಬಿ,ಎಂ,ಎಸ್ ಮೈದಾನದಲ್ಲಿ ಮಾರ್ಚ್ ೧ ರಂದು ನಡೆಯಲಿರುವ ಲಿಂಕೆನಲ್ ಯೋಜನೆಯ ಶಂಕುಸ್ಥಾಪನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಸಮಾವೇಶ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ,ಕೆ ಶಿವಕುಮಾರ್ ಸಂಸದ ಡಿ,ಕೆ ಸುರೇಶ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಈ ಹಿನ್ನೆಲೆಯಲ್ಲಿ ಮಂಗಳವಾರ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಕುಣಿಗಲ್ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳ ಸಭೆ
ನಡೆಸಿದ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಮಾತನಾಡಿ ಗೃಹಲಕ್ಷ್ಮಿ ಯೋಜನೆಯ ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತರುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗಳ ಹೆಗಲಿಗೆ ನಿಡಲಾಗಿದೆ ಎಂದು ತಿಳಿದು ಬಂದಿದೆ ಬಳಿಕ ತಾಲ್ಲೂಕು ಕಚೇರಿಯ ರೆಕಾರ್ಡ್ ರೂಂ ಹಾಗೂ ವಿವಿಧ ಕೊಠಡಿಗಳಿಗೆ ಬೇಟಿ ನೀಡಿ ಅಧಿಕಾರಿಗಳ ಕಾರ್ಯ ವೈಕರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಬಳಿಕ ಪಟ್ಟಣದ ಜಿ,ಕೆ,ಬಿ,ಎಂ,ಎಸ್ ಮೈದಾನಕ್ಕೆ ಅಧಿಕಾರಿಗಳೊಂದಿಗೆ ಬೇಟಿ ನೀಡಿ
ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ,ಪ್ರಭು ತುಮಕೂರು ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಾಲ್ಲೂಕು ಉಸ್ತುವಾರಿ ಕಾರ್ಯದರ್ಶಿ ವಿ,ಆರ್ ವಿಶ್ವನಾಥ್ ತಾಲ್ಲೂಕು ದಂಡಾಧಿಕಾರಿ ವಿಶ್ವನಾಥ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾ ಅಧಿಕಾರಿ ಜೋಸೆಫ್ ಪಟ್ಟಣದ ಪೊಲೀಸ್ ಠಾಣೆಯ ಸಿಪಿಐ ನವೀನ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು @publicnewskunigal