ಲೋಕಸಭಾ ಚುನಾವಣೆ ಹಿನ್ನೆಲೆ ಪಟ್ಟಣದಲ್ಲಿ ಬೈಕ್ ರ‍್ಯಾಲಿ ಮೂಲಕ ಮತದಾನ ಜಾಗೃತಿ ಜಾತಾ ಕಾರ್ಯಕ್ರಮವನ್ನು ಹಮ್ಮಿಕೋಳ್ಳಲಾಗಿತ್ತು
ಕುಣಿಗಲ್;-ಲೋಕಸಭೆ ಚುನಾವಣೆಯ ಹಿನ್ನಲೆ, ತಾಲ್ಲೂಕು ಆಡಳಿತ ವತಿಯಿಂದ ಚುನಾವಣಾ ಪರ್ವ ದೇಶದ ಗರ್ವ ಎಂಬ ಅಭಿಯಾನದಡಿ ಜಾಗೃತಿ ರಥಕ್ಕೆ ಸಹಾಯಕ ಚುನಾವಣಾ ಅಧಿಕಾರಿಗಳು ಶ್ರೀಯುತ ಮಹೇಶ್ ರವರು ಮಂಗಳವಾರ ಕುಣಿಗಲ್ ಪಟ್ಟಣದ ಪ್ರವಾಸಿ ಮಂದಿರದ ಬಳಿ ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು ಚುನಾವಣೆಗಳು ಪ್ರಜಾತಂತ್ರದ ಉತ್ಸವಗಳು ದೇಶದ ಪ್ರಗತಿಯ ದಿಕ್ಕನ್ನು ಬದಲಾಯಿಸುವ ಶಕ್ತಿ ಮತದಾನಕ್ಕಿದೆ. ಪ್ರತಿಯೊಬ್ಬ ನಾಗರಿಕರು ಕೂಡ ಕಡ್ಡಾಯವಾಗಿ ಮತವನ್ನು ಚಲಾಯಿಸುವ ಮೂಲಕ ದೇಶದ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿ ಭಾಗಿಯಾಗಬೇಕು ಎದರು
ಬಳಿಕ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಮುನಿಯಪ್ಪ ಮಾತನಾಡಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಂದು ನಡೆಯಲಿರುವ ಮತದಾನ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾತಾ ಅಮ್ಮಿಕೋಳ್ಳಲಾಗಿದೆ ತಪ್ಪದೆ ಎಲ್ಲಾರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಿ ಪ್ರಜ್ಞಾವಂತ ನಾಗರಿಕರು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಳ ಮಾಡಬೇಕು ಎಂದು ತಿಳಿಸಿದರು,
‘ನಮ್ಮ ಮತ ನಮ್ಮ ಹಕ್ಕು’ ಯಾವುದೇ ಹಣ, ಹೆಂಡದ ಆಮಿಷ ಹಾಗೂ ಇತರೆ ಆಸೆಗಳಿಗೆ ಒಳಗಾಗದೆ ಮತದಾನ ಮಾಡಬೇಕು. ದೇಶದ ಪ್ರಜಾಪ್ರಭುತ್ವ ಉಳಿಸಲು ಪ್ರತಿಯೊಬ್ಬ ನಾಗರಿಕರ ಕೂಡ ಕಡ್ಡಾಯವಾಗಿ ಮತದಾನ ಮಾಡಿ ಎಂದು ಉಪಚುನಾವಣಾಧಿಕಾರಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆಯ ಮುಖ್ಯ ಅಧಿಕಾರಿಗಳು ಮಂಜುಳ, ಸಹಾಯಕ ನಿರ್ದೇಶಕರು ತಾಲೂಕು ಪಂಚಾಯಿತಿ ಕುಣಿಗಲ್ ಸುರೇಶ್ ರವರು, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತದಾನ ಜಾಗೃತಿ ಜಾತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು @publicnewskunigal