KUNIGAL|ವಿಚಾರಣೆ ನೆಪದಲ್ಲಿ ವಾಟರ್ ಮೆನ್ ಮೇಲೆ ಹಲ್ಲೆ ಪ್ರಕರಣ DYSP ಸೇರಿ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದೆ!
ಕುಣಿಗಲ್;- ತಾಲ್ಲೂಕಿನ ಕೆ,ಹೊನ್ನಮಾಚನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ವಾಟರ್ ಮೆನ್ ಹಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ್ ನನ್ನು ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿ ಅಕ್ರಮ ಬಂಧನದಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ
ಕುಣಿಗಲ್ ಉಪ ವಿಭಾಗದ DYSP ಓಂ ಪ್ರಕಾಶ್,ಅಮೃತೂರು ಸಿಪಿಐ ಮಾಧ್ಯನಾಯಕ್,ಅಮೃತೂರು ಪಿಎಸ್ಐ ಶಮಂತಗೌಡ ಅಮೃತೂರು ಮುಖ್ಯ ಪೇದೆ ದಯಾನಂದ್ ಎಂಬುವವರ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಣಿಗಲ್ ತಾಲ್ಲೂಕಿನ ಅಮೃತೂರು ವ್ಯಾಪ್ತಿಯ ಕೆ,ಹೊನ್ನಮಾಚನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ವಾಟರ್ ಮೆನ್ ಹಾಗಿ ಕರ್ತವ್ಯ ಸಲ್ಲಿಸುತ್ತಿದ್ದ ಗಂಗಾಧರಯ್ಯ ಎಂಬುವರು 2024ರ ಮಾರ್ಚ್ 21 ರಂದು ಕರ್ತವ್ಯಕ್ಕೆ ತೆರಳುವಾಗ ರಾಘವನ ಹೊಸೂರು ಗ್ರಾಮದ ಬಳಿ ಅಮೃತೂರು ಪೊಲೀಸರು ವಿಚಾರಣೆ ಗಂಗಾಧರಯ್ಯ ಅವರನ್ನು ಕುಣಿಗಲ್ ಪೊಲೀಸ್ ಠಾಣೆಗೆ ಕರೆದೋಯ ಹಲ್ಲೆ ನಡೆಸಿದ್ದರು ಎನ್ನಲಾಗಿದೆ ಬಳಿಕ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡದೆ ಸಂಜೆ ನಂತರ ವಾಟರ್ ಮೆನ್ ನನ್ನು ಬಿಟ್ಟು ಕಳಿಸಲಾಗಿದೆ ಗಂಭೀರವಾಗಿ ಹಲ್ಲೆಗೆ ಒಳಗಾಗಿದ್ದ ಗಂಗಾಧರಯ್ಯ ಅಮೃತೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ನಂತರ ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದು ನಂತರ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನ್ಯಾಯಾಲಯ ಮೆಟ್ಟಿಲೇರಿದ್ದರು ಈ ಹಿನ್ನೆಲೆಯಲ್ಲಿ ಘನ ನ್ಯಾಯಾಲಯದ ಆದೇಶದ ಮೇರೆಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ @publicnewskunigal