
KUNIGAL-ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು ಪ್ರಕರಣ ದಾಖಲು!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಎಲೆಕಡಕಲು ಗ್ರಾಮದ ನಿವಾಸಿ ವಾಸು (30) ಮೃತ ದುರ್ದೈವಿ ಶುಕ್ರವಾರ ರಾತ್ರಿ 9-30 ರ ಸಮಯದಲ್ಲಿ ಉಜ್ಜನಿ ಗ್ರಾಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ವಾಪಸ್ ಮನೆಗೆ ಬಂದಿರಲಿಲ್ಲ ರಾತ್ರಿ ಕುಟುಂಬಸ್ಥರು ಪೋನ್ ಮಾಡಿದರೆ ಕರೆ ಸ್ವೀಕರಿಸಿರಲಿಲ್ಲ ಉಜ್ಜನಿ ಗ್ರಾಮದಿಂದ ಚನ್ನಪಟ್ಟಣಕ್ಕೆ ತೆರಳುವ ರಸ್ತೆಯ ದೇವಸಂದ್ರ ಬಳಿ ರಸ್ತೆ ತಿರುವಿನಲ್ಲಿ ಹಳ್ಳದಲ್ಲಿ ಬೈಕ್ ಒಂದುಕಡೆ ಮೃತ ದೇಹ ಒಂದುಕಡೆ ಬಿದ್ದಿರುವುದು ಶನಿವಾರ ಬೆಳಗ್ಗೆ ಕಂಡುಬಂದಿದೆ ತಡರಾತ್ರಿ ಬೈಕ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ

ಸ್ಥಳೀಯರ ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಜಿ,ಆರ್,ಬಿ ಕಂಪನಿಯಲ್ಲಿ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವಾಸು ಕಳೆದ ಆರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಎಂದು ತಿಳಿದುಬಂದಿದೆ ಮನೆಗೆ ಬರುವುದಾಗಿ ತೆರಳಿದ ಮಗ ವಾಪಸ್ ಮನೆ ಸೆರಲಿಲ್ಲ ಎಂದು ಮೃತ ದೇಹದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು @publicnewskunigal