ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ!

Spread the love

ನವದೆಹಲಿ;-ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮೊನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ!

ಮನಮೋಹನ್ ಸಿಂಗ್ ರವರಿಗೆ (92) ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ 9:51ಕ್ಕೆ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ಏಮ್ಸ್ ಆಸ್ಪತ್ರೆಯು ಪ್ರಕಟಣೆ ಮೂಲಕ ತಿಳಿಸಿದೆ.

ಡಾ.ಮನಮೋಹನ್ ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.

ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು ಬಳಿಕ 2004 ರಿಂದ 2014ರ ವರೆಗೆ ದೇಶದ ಪ್ರಧಾನಿಯಾಗಿದ್ದರು.

ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನದ ಹಿನ್ನೆಲೆ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು ಜೊತೆಗೆ ನಾಳೆ ದಿನಾಂಕ 27.12.2024 ರಂದು ಸರ್ಕಾರಿ ರಜೆ ಘೋಷಿಸಲಾಗಿದೆ

ಐತಿಹಾಸಿಕ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ರದ್ದು ಮಾಡಲಾಗಿದೆ,1924ರಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸಮಾರಂಭದ ಭಾಗವಾಗಿ ಬೆಳಗಾವಿಯಲ್ಲಿ ರಾಜ್ಯ ಸರ್ಕಾರದಿಂದ ಗಾಂಧಿ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎರಡನೇ ದಿನವಾದ ಶುಕ್ರವಾರ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಬೇಕಿತ್ತು. ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್‌ ಅಧಿವೇಶನ ಇದಾಗಿದ್ದರಿಂದ ಅವರ ನೆನಪಿಗಾಗಿ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಆದರೆ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿದ್ದು, ರಾಜ್ಯದ ನಾಯಕರು ಅಂತಿಮ ದರ್ಶನ ಪಡೆಯಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ@publicnewskunigal