ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಅಪಘಾತ ಸ್ಥಳದಲ್ಲಿ ಚಿರತೆ ಸಾವು!

Spread the love

ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಹಿನ್ನೆಲೆ ಸ್ಥಳದಲ್ಲಿ ಮೂರು ವರ್ಷ ವಯಸ್ಸಿನ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ

ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬ್ಯಾಲದ ಕೆರೆ ಸಮೀಪ ಶನಿವಾರ ರಾತ್ರಿ ಎಂಟು ಗಂಟೆಯ ಸಮಯದಲ್ಲಿ ರಸ್ತೆ ದಾಟುತ್ತಿದ್ದ ಚಿರತೆಗೆ ಅತಿ ವೇಗದಲ್ಲಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಗಂಡು ಚಿರತೆ ಸ್ಥಳದಲ್ಲಿ ಸಾವನಪ್ಪಿದೆ ಸ್ಥಳಿಯರ ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾವನ್ನಪ್ಪಿರುವ ಚಿರತೆಯ ಕಳೆಬರಹವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ವಲಯ ಅರಣ್ಯಧಿಕಾರಿ ಪಿ,ಜಗದೀಶ್ ತಿಳಿಸಿದ್ದಾರೆ @publicnewskunigal