
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರು!
ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಹೇರೂರು ಗ್ರಾಮದ ಬಳಿ ಭಾನುವಾರ ಮುಂಜಾನೆ ಕುಕ್ಕೆ ಸುಬ್ರಮಣ್ಯ ದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಕೆಳಗೆ ಬಿದ್ದಿದ್ದು ಬಸ್ ನಲ್ಲಿ ಒಟ್ಟು 24 ಜನ ಪ್ರಯಾಣಿಕರು ಇದ್ದರು.ಬಸ್ ಪಲ್ಟಿಯಿಂದಾಗಿ 5 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನ ಕುಣಿಗಲ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆಯ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ವಾಪಸ್ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ @publicnewskunigal