
ರಾಜ್ಯ ಹೆದ್ದಾರಿ 33 ರಲ್ಲಿ ರಸ್ತೆ ಅಪಘಾತ ಸಂಭವಿಸಿ ಒರ್ವ ಸಾವು ಮತ್ತೊರ್ವನಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ಮಾದಪ್ಪನಹಳ್ಳಿ ಗ್ರಾಮದ ಗೇಟ್ ಬಳಿ ಬುಧವಾರ ಕುಣಿಗಲ್ ಕಡೆಯಿಂದ ಬರುತ್ತಿದ್ದ ಮಾರುತಿ ಶಿಪ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಾಲಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬೇಗೂರು ಗ್ರಾಮದ ಸಂದಿಪ್ ಗೌಡ (14) ಸ್ಥಳದಲ್ಲಿ ಸಾವನ್ನಪ್ಪಿದ್ದು ಚಾಲಕ ಬಿಚನಹಳ್ಳಿ ಗ್ರಾಮದ ಕುಮಾರ್ (48) ಗೆ ಗಂಭೀರ ಗಾಯವಾಗಿದೆ ಸ್ಥಳಿಯರ ನೆರವಿನಿಂದ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಕಂಗೊಂಡಿದೆ
ಬೀಚನಹಳ್ಳಿ ಗ್ರಾಮದಲ್ಲಿ ಹಬ್ಬವಿದ್ದ ಹಿನ್ನೆಲೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಬೇಗೂರು ಗ್ರಾಮಕ್ಕೆ ಕರೆದೊಯ್ಯುದ್ದು ವಾಪಸ್ ಗ್ರಾಮಕ್ಕೆ ಬರುವ ವೇಳೆ ಅವಘಡ ಸಂಭವಿಸಿದೆ ಸ್ಥಳಕ್ಕೆ ಸಿಪಿಐ ಮಾಧ್ಯಾನಾಯಕ್ ಪಿಎಸ್ಐ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಜ್ಯ ಹೆದ್ದಾರಿ 33ರಲ್ಲಿ ಇತ್ತಿಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿದ್ದು ಸಾವಿನ ಕೂಪವಾಗುತಿದೆ ಹಲವರು ಪ್ರಾಣ ಕಳೆದುಕೊಳ್ಳುವಂತಾಗಿದೆ ಕೆಶೀಫ್ ಅಧಿಕಾರಿಗಳು ರಸ್ತೆ ಸುರಕ್ಷತೆಯ ಬಗ್ಗೆ ಗಮನ ಹರಿಸಿ ಅಫಘಾತ ವಲಯಗಳನ್ನು ಗುರುತಿಸಿ ಸುರಕ್ಷತ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹವಾಗಿದೆ @publicnewskunigal