
ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜೆ.ಜೆ.ಎಂ ಕಾಮಗಾರಿಗೆ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಗುದ್ದಲಿ ಪೂಜೆ! ಟೆಂಡರ್ ಪ್ರಕ್ರಿಯೆಯಲ್ಲಿ 200 ಕಾಮಗಾರಿಗಳು!
ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಗ್ರಾಮದಲ್ಲಿ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಯೋಜನೆಗೆ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು ಇದೆ ವೇಳೆ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಇತ್ತೀಚೆಗೆ ಕುಡಿಯುವ ನೀರನ ಸಮಸ್ಯೆ ಹೆಚ್ಚುತ್ತಿದ್ದು ಶೀಘ್ರ ಕಾಮಗಾರಿ ಯಾವುದೆ ಸಮಸ್ಯೆ ಇಲ್ಲದಹಾಗೆ ಪೂರ್ಣಗೊಳಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿ ಹಾಗೂ ಗುತ್ತಿಗೆದಾರನಿಗೆ ಸೂಚಿಸಿದರು
ಇನ್ನೂ ತಾಲ್ಲೂಕಿನಲ್ಲಿ ನಡೆಯುತ್ತಿರುವ ಜೆ.ಜೆ.ಎಂ ಕಾಮಾಗಾರಿಗಳ ಬಗ್ಗೆ ಇಂಜಿನಿಯರ್ ನಿಂದ ಮಾಹಿತಿ ಪಡೆದ ಸಂಸದರು ತಾಲ್ಲೂಕಿನಲ್ಲಿ ಜೆ.ಜೆ.ಎಂ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯ ಮಗಿದರು ಸಹ ಕಾಮಗಾರಿಯನ್ನು ಕೈಗೆತ್ತಿಕೊಳ್ಳದ ಕಾರಣ ಸುಮಾರು 200 ಕಾಮಗಾರಿಗಳು ಮರು ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದು ಇಂಜಿನಿಯರ್ ಅನಿಲ್ ತೀಳಿಸಿದರು ಸಂಸದರು ಮಾತನಾಡಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಜೆ.ಜೆ.ಎಂ ಕಾಮಾಗಾರಿಯು ಒಂದಾಗಿದ್ದು ಟೆಂಡರ್ ಪ್ರಕ್ರಿಯೆಯಗಳನ್ನು ನಿಗಧಿತ ಸಮಯದಲ್ಲಿ ಮುಗಿಸಿ ಕಾಮಾಗಾರಿಗಳನ್ನು ಪ್ರಾರಂಭಿಸಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಕ್ರಮವಹಿಸಲು ಸೂಚಿಸಿದರು ಈ ವೇಳೆ ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್.ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ಎನ್ ಜಗದೀಶ್.ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷ ಸಿ.ಎಸ್ ಪ್ರಸನ್ನ.ಬಿಳಿಲಿಂಗೆಗೌಡ.ಗ್ರಾಮ ಪಂಚಾಯ್ತಿ ಸದಸ್ಯರಾದ ಪುಪ್ಪಲತಾ ಬೆಟ್ಟಸ್ವಾಮಿ.ಹರೀಶ್.ಪಿಡಿಒ ಮಂಜುನಾಥ್ ಮುಖಂಡರಾದ ಬಲರಾಮು.ತರೀಕೆರೆ ಪ್ರಕಾಶ್.ಧನುಷ್.ಗುತ್ತಿಗೆದಾರ ಗಗನ್.ರವೀಂದ್ರ. ಸೇರಿದಂತೆ ಹಲವರು ಉಪಸ್ಥಿತರಿದ್ದರು @publicnewskunigal