
ಕುಣಿಗಲ್ ಸುದ್ದಿ ;-ತಾವರೆಕೆರೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಜೇಶ್ ನನ್ನು ಕೆಲಸದಿಂದ ವಜಾ ಗೋಳಿಸುವಂತೆ ಒತ್ತಾಯಿಸಿ ತಾ.ಪಂ ಕಚೇರಿಯ ಮುಂದೆ ಧರಣಿ!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಹುದ್ದೆಯನ್ನು ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ನೇಮಕಾತಿ ಪಡೆದು ಹಾಗೂ ಕಂದಾಯ ಹಣವನ್ನು ಅಕ್ರಮವಾಗಿ ದುರುಪಯೋಗ ಮಾಡಿಕೊಂಡಿರುವ ರಾಜೇಶ್ ಹೆಚ್.ಎಸ್ ಎಂಬುವವರನ್ನು ಬಿಲ್ ಕಲೆಕ್ಟರ್ ಹುದ್ದೆಯಿಂದ ವಜಾಗೊಳಿಸುವಂತೆ ಆತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕಳೆದ ನಾಲ್ಕು ತಿಂಗಳ ಹಿಂದೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ನ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು ಆದರೆ ಇದುವರೆಗೂ ಯಾವುದೆ ಕ್ರಮ ಕೈಗೊಳ್ಳದ ಕಾರಣ ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿಯ ಮುಂಭಾಗ ನ್ಯಾಯಕ್ಕಾಗಿ ಆಗ್ರಹಿಸಿ ಸೋಮವಾರ ದೂರುದಾರರಾದ ಕಾಂತರಾಜು. ಎಂಬುವವರು ತಾವರೆಕೆರೆ ಗ್ರಾಮ ಪಂಚಾಯ್ತಿಯಲ್ಲಿ ಬಿಲ್ ಕಲೆಕ್ಟರ್ ಹಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೇಶ್ ಎಂಬುವವರನ್ನು ಕೆಲಸದಿಂದ ವಜಾ ಮಾಡಿ ಕ್ರಿಮಿನಲ್ ಪ್ರಕರಣ ದಾಖಲಿಸದೆ ರಕ್ಷಣೆ ಮಾಡುತ್ತಿರುವ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣ ಅಧಿಕಾರಿಯ ವಿರುದ್ಧ ಅನಿರ್ದಿಷ್ಟ ಅವಧಿ ಅಹೊರಾತ್ರಿ ಧರಣಿ ಸತ್ಯಾಗ್ರಹ ಕೈಂಗೊಂಡಿದ್ದು ಬಿಲ್ ಕಲೆಕ್ಟರ್ ವಿರುದ್ದ ಕ್ರಮ ಕೈಗೊಳ್ಳುವ ವರೆಗೆ ಧರಣಿ ಮುಂದುವರೆಸಲಾಗುವುದು ಎಂದು ಕಾಂತರಾಜು ತಿಳಿಸಿದ್ದು ಈ ವೇಳೆ ಶ್ರೀನಿವಾಸ್.ಕಾಂತರಾಜು. ದೇವರಾಜು.ನಂದೀಶ್.ಲೋಕೇಶ್.ಹೆಚ್.ಎಸ್ ನಂದಿಶ್ ಉಪಸ್ಥಿತರಿದ್ದರು @publicnewskunigal