
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಭೀಕರ ರಸ್ತೆ ಅಪಘಾತ ಹಲವರಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ಬೊಮ್ಮನಹಳ್ಳಿ ಗೇಟ್ ಬಳಿ ಗುರುವಾರ ಸಂಜೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಗ್ರಾಮದ ನಾಲ್ವರು ಚನ್ನಪಟ್ಟ ತಾಲ್ಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಇನೊವಾ ಕಾರಿನಲ್ಲಿ ಹೋಗಿ ವಾಪಸ್ ಕೊರಟಗೆರೆ ತೆರಳುವ ವೇಳೆ ರಾಜ್ಯ ಹೆದ್ದಾರಿ 33ರ
ಬೊಮ್ಮನಹಳ್ಳಿ ಗೇಟ್ ಬಳಿ ಮತ್ತೊಂದು ವಾಹನವನ್ನು ಹಿಂದಿಕ್ಕೂವ ವೇಳೆ ಕುಣಿಗಲ್ ಕಡೆಯಿಂದ ಎದುರಿಗೆ ಬರುತ್ತಿದ್ದ ಶಿಫ್ಟ್ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ಇಬ್ಬರು ಮ್ಕಳು ಸೇರಿದಂತೆ ಏಳು ಮಂದಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನ ಸ್ಥಳಿಯರ ನೆರವಿನಿಂದ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿದೆ ಅಪಘಾತದ ರಭಸಕ್ಕೆ ಎರಡು ಕಾರುಗಳು ಜಕಂಗೊಂಡಿದ್ದು ಸ್ಥಳಕ್ಕೆ ಹುಲಿಯೂರುದುರ್ಗ ಪಿಎಸ್ಐ ಪ್ರಶಾಂತ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಭಂದ ಹುುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal