
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯ ವಿಷಯವಾಗಿ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ಯೋಜನೆಯ ವಿಷಯವಾಗಿ ಕೊನೆಗೂ ಮೌನ ಮುರಿದಿದ್ದಾರೆ!
ಬೆಂಗಳೂರು ಕಳೆದ ಕೆಲ ದಿನಗಳಿಂದ ಹೇಮಾವತಿ ಲಿಂಕ್ ಕೆನಾಲ್ ಯೋಜನೆಯ ಕಾರಣದಿಂದ ತುಮಕೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹೋರಾಟದ ಜೋತೆಗೆ ಯೋಜನೆಯ ಪರ ವಿರೋಧ ಚರ್ಚೆಗಳ ಜೋತೆಗೆ ರಾಜಕೀಯ ತಿರುವು ಪಡೆದುಕೊಂಡು ಎರಡು ಜಿಲ್ಲೆಯ ರೈತರ ಸಂಘರ್ಷಕ್ಕೆ ಕಾರಣವಾಗಿದೆ ಈ ಕುರಿತು ಹಲವು ದಿನಗಳಿಂದ ಮೌನವಾಗಿದ್ದ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಇಗ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಪತ್ರ ಬರೆಯುವ ಮೂಲಕ ಮೌನ ಮುರಿದಿದ್ದು ಸರ್ಕಾರ ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯ ವಿಷಯವಾಗಿ ಕಳೆದ ಕೆಲ ದಿನಗಳಿಂದ ಸಾಕಷ್ಟು ವಿವಾದ ಸೃಷ್ಟಿಯಾಗಿರುವುದು ವಿಷಾದಕರ ಬೆಳವಣಿಗೆಯಾಗಿದೆ ಸೌಹಾರ್ದತೆಯಿಂದ ಅನ್ಯೋನ್ಯವಾಗಿ ಇರಬೇಕಾದ ಅಕ್ಕ ಪಕ್ಕದ ಜಿಲ್ಲೆಗಳ ನಡುವೆ ಈ ವಿವಾದಿಂದಾಗಿ ಕಂದಕ ಸೃಷ್ಟಿಯಾಗಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಬೆಳವಣಿಗೆಯಾಗಿದೆ ಸೌಹಾರ್ದತೆಯಿಂದ ಅನ್ಯೋನ್ಯವಾಗಿ ಇರಬೇಕಾದ ಅಕ್ಕ ಪಕ್ಕದ ಜಿಲ್ಲೆಗಳ ನಡುವೆ ಈ ವಿವಾದಿಂದಾಗಿ ಕಂದಕ ಸೃಷ್ಟಿಯಾಗಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಈ ಹಿನ್ನಲೆ ತಮ್ಮ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕೂಡಲೇ ಎರಡೂ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ರೈತ ಮುಖಂಡರ ಮತ್ತು ನೀರಾವರಿ ತಜ್ಞರ ಸಭೆ ಕರೆದು ಈ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಅವಲೋಕಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ರಾಜ್ಯದ ಜನತೆಗೆ ವ್ಯವಸಾಯಕ್ಕೆ ಮತ್ತು ಕುಡಿಯಲು ಯೋಗ್ಯವಾದ ನೀರು ಒದಗಿಸುವುದು ಜನಪ್ರತಿನಿಧಿಗಳಾದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಸಂಘರ್ಷಕ್ಕೆ ಎಡೆಮಾಡಿಕೊಡದೆ ಎರಡು ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರಿಗೆ ನೀರು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಸದರು ಮುಖ್ಯಮಂತ್ರಿಗಳಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ@publicnewskunigal