ರಾಜ್ಯ ಹೆದ್ದಾರಿ 33ರ ಚಿಕ್ಕಕೆರೆಯ ಬಳಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ!
ಕುಣಿಗಲ್ ತಾಲ್ಲೂಕಿನ ರಾಜ್ಯ ಹೆದ್ದಾರಿ 33ರ ಚಿಕ್ಕಕೆರೆ ಪಾರ್ಕ್ ಬಳಿ ಜುಲೈ 5 ರಂದು ಕಾರು ಮತ್ತು ಬೈಕ್ ನಡುವೆ ಮುಖ ಮುಖಿ ಡಿಕ್ಕಿ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ತರಿಕೆರೆ ಗ್ರಾಮದ ಮಹೇಶ್ (23)ನನ್ನು ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ದ್ವಿಚಕ್ರ ವಾಹನ ಚಾಲನೆ ವೇಳೆ ಮಹೇಶ್ ಎಲ್ಮೇಟ್ ಧರಿಸದ ಕಾರಣ ಅಫಘಾತದ ವೇಳೆ ಮುಖ ತಲೆ ಸೇರಿದಂತೆ ಹಲವು ಕಡೆಗಳಲ್ಲಿ ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಶನಿವಾರ ಸಾವನ್ನಪ್ಪಿದ್ದಾನೆ ನೆಲಮಂಗಲ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹೇಶ್ ಕುಟುಂಬಕ್ಕೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮನ ಕಲಕುವಂತಿತ್ತು ಇನ್ನೂ ಘಟನೆ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal