ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ ಹಿನ್ನೆಲೆ ರೋಗಿಗಳ ಪರದಾಟ!
ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯ ಕಾರಣದಿಂದ ಇಡಿ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಜೋತೆಗೆ ವೈದ್ಯರು ಸಹ ಹೊರ ರೋಗಿಗಳ ತಪಾಸಣೆ ನಡೆಸುವ ವೇಳೆ ಮೊಬೈಲ್ ಟಾರ್ಚ್ ಬಳಸಿ ತಪಾಸಣೆ ನಡೆಸಿದ ಘಟನೆ ನಡೆದಿದೆ ಸಾರ್ವಜನಿಕ ಆಸ್ಪತ್ರೆಗೆ ವಿದ್ಯುತ್ ಸಂಪರ್ಕ ಮಾಡುವ 450 ಕೆ.ವಿ ಪರಿವರ್ತಕದಲ್ಲಿ ಸಮಸ್ಯೆ ಉಂಟಾಗಿದ್ದ
ಕಾರಣ ಆಗೂ ಜನರೇಟರ್ ಕಾರ್ಯನಿರ್ವಹಿಸದ ಹಿನ್ನೆಲೆ ಆಸ್ಪತ್ರೆಗೆ ಡಯಾಲಿಸಿಸ್ ಗೆ ದಾಖಲಾಗಿದ್ದ ರೋಗಿಗಳಿಗೆ ವಿದ್ಯುತ್ ಸಮಸ್ಯೆ ಕಾರಣದಿಂದ ಡಯಾಲಿಸಿಸ್ ಯಂತ್ರಗಳು ಹಾಗೂ ಆಕ್ಸಿಜನ್ ಯಂತ್ರಗಳು ಕಾರ್ಯನಿರ್ವಹಿಸಿಲ್ಲ ಈ ಗಾಗಿಸಕಾಲದಲ್ಲಿ ಚಿಕಿತ್ಸೆ ರೋಗಿಗಳಿಗೆ ಚಿಕಿತ್ಸೆ ಸಿಗದೆ ಉಸಿರಾಟದ ಸಮಸ್ಯೆ ಉಂಟಾದ ಕಾರಣ ಕೂಡಲೆ ಡಯಾಲಿಸಿಸ್ ಗೆ ದಾಖಲಾಗಿದ್ದ ಒರ್ವ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆಗೆ ಸಾರ್ವಜನಿಕರು ಹಾಗೂ ರೋಗಿಗಳು ಅಸಮಾಧಾನ ವ್ಯಕ್ತಪಡಿಸಿದ್ದು ಕೂಡಲೆ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿದರು ಬಳಿಕ ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಧ್ಯಾನ್ನದ ವೇಳೆಗೆ ಪರಿವರ್ತಕದ ಸಮಸ್ಯೆ ಸರಿಪಡಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಶೌಚಾಲಯ ನಿರ್ವಹಣೆ ಇಲ್ಲದಂತಾಗಿದ್ದು ರೋಗಿಗಳು ಮೂಗು ಮುಚ್ಚಿಕೊಂಡು ಒಡಾಡುವ ಸ್ಥಿತಿ ನಿರ್ಮಾಣವಾಗಿದ್ದು ಕೂಡಲೆ ಶಾಸಕರು ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಗಮನ ಹರಿಸಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ @publicnewskunigal