ಅಕ್ರಮವಾಗಿ ಕಲ್ಲು ಗಣಿಗಾರಿಕೆ ಆರೋಪ ಕಲ್ಲು ಸಾಗಿಸುತ್ತಿದ್ದ ಲಾರಿ ವಶಕ್ಕೆ ಪಡೆದ ಪೊಲೀಸರು!
ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಬೇಗೂರು ಗ್ರಾಮದ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪ ಕೇಳಿಬಂದಿದ್ದು ಅಕ್ರಮವಾಗಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ ಬೇಗೂರು ಗ್ರಾಮದ ಸರ್ವೆನಂ 29 ರ ಸರ್ಕಾರಿ ಜಮೀನಿನಲ್ಲಿ ಯಾವುದೆ ಅನುಮತಿ ಇಲ್ಲದೆ ಅಕ್ರಮವಾಗಿ ಹಲವು ದಿನಗಳಿಂದ ಗಣಿಗಾರಿಕೆ ನಡೆಸುತ್ತಿದ್ದು ಎಂದು ಕರೆ ಬಂದ ಹಿನ್ನೆಲೆಯಲ್ಲಿ ಕಾರ್ಯ ಪ್ರವೃತ್ತರಾದ ಕುಣಿಗಲ್ ಪಟ್ಟಣದ ಪೊಲೀಸರು ಅಕ್ರಮವಾಗಿ ಕಲ್ಲು ತುಂಬಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ಲಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಡಿದ್ದಾರೆ