ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಕಾರು ರ್ಯಾಲಿ ವೇಳೆ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ!
ಬೆಂಗಳೂರು;-ಶಾಸಕ ರಾಮಮೂರ್ತಿ ಹಾಗು ಬೆಂಬಲಿಗರಿಂದ ಧರ್ಮಸ್ಥಳಕ್ಕೆ ನಡೆಯುತ್ತಿದ್ದ ಕಾರ್ ರ್ಯಾಲಿ ವೇಳೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ ಸೋಮವಾರ ಬೆಳಗ್ಗೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಧರ್ಮಸ್ಥಳಕ್ಕೆ ತೆರಳುವ ಮಾರ್ಗ ಮಧ್ಯೆ ಬೆಳ್ಳೂರು ಕ್ರಾಸ್ ನ ದೇವಿಹಳ್ಳಿ ಬಳಿ ಘಟನೆ ಸಂಭವಿಸಿದೆ ರಸ್ತೆ

ದಾಟುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಫಾರ್ಚೂನರ್ ಕಾರು ಡಿಕ್ಕಿಯಾದ ಪರಿಣಾಮ ಅವಘಡ ಸಂಭವಿಸಿದೆ ಮೃತನ ಹೆಸರು ತಿಳಿದುಬಂದಿಲ್ಲ ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ
ಧರ್ಮಸ್ಥಳ ವಿರುದ್ಧ ಅಪಪ್ರಚಾರ ವಿರೋಧಿಸಿ ಕಳೆದ ಒಂದು ವಾರದಿಂದ ಬಿಜೆಪಿ ಪಕ್ಷದ ವಿವಿಧ ಕ್ಷೇತ್ರದ ಶಾಸಕರು ಹಾಗೂ ಮುಖಂಡರು ಕಾರ್ ಯಾರ್ಲಿ ನಡೆಯುತ್ತಿದ್ದು ಸೋಮವಾರ ಶಾಸಕ ರಾಮಮೂರ್ತಿ ನೇತೃತ್ವದಲ್ಲಿ ನೂರಾರು ಕಾರುಗಳಲ್ಲಿ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುವಾಗ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ@publicnewskunigal