ರಾಜ್ಯ ಹೆದ್ದಾರಿ 33ರಲ್ಲಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು!
ಕುಣಿಗಲ್ ಪಟ್ಟಣದ ರಾಜ್ಯ ಹೆದ್ದಾರಿ 33 ರ ಹನುಮಾಪುರ ಗೇಟ್ ನಲ್ಲಿ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ ಕುಣಿಗಲ್ ಕಡೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ರಸ್ತೆ ಬದಿಯಲ್ಲಿ ಹೊಗುತ್ತಿದ್ದ ದ್ವಿಚಕ್ರ ವಾಹನನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಹೊರ ರಾಜ್ಯದ ಕೂಲಿ ಕಾರ್ಮಿಕ ಹರ್ಮಾನ್ (30) ಕಾಲು ಮುರಿದು ತಲೆಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಗಾಯಳುವನ್ನು ಸ್ಥಳಿಯರ ನೆರವಿನೊಂದಿಗೆ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಘಟನೆ ಸಂಬಂಧ ಕುಣಿಗಲ್ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅಪಘಾತ ವಾಗುತ್ತಿದ್ದಂತೆ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ @publicnewskunigal