ಬೆಂಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲಿ ದಂಪತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ!
ಕುಣಿಗಲ್ ತಾಲ್ಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಿದ್ದಪುರ ಗೇಟ್ ಬಳಿ ಯುಟರ್ನ್ ಪಡೆಯುತ್ತಿದ್ದ ವೇಳೆ ಯಡಿಯೂರು ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ದಂಪತಿಗಳಿಬ್ಬರು ಸಾವನ್ನಪ್ಪಿದ್ದಾರೆ ತಾಲ್ಲೂಕಿನ ಹಳೆವೂರು ಗ್ರಾಮದ ವಾಸಿಗಳಾದ ಶಿವಶಂಕರ್ (61) ಸುನಂದಮ್ಮ(55) ಮೃತ ದುರ್ದೈವಿಗಳು ಬುಧವಾರ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಸ್ ಹಳೆವೂರು ಗ್ರಾಮಕ್ಕೆ ಬರುವ ವೇಳೆ ರಾಷ್ಟ್ರೀಯ ಹೆದ್ದಾರಿ75 ರಲ್ಲಿ ಘಟನೆ ಸಂಭವಿಸಿದೆ ಸ್ಥಳಕ್ಕೆ ಅಮೃತೂರು ಪಿಎಸ್ಐ ಶಮಂತ್‌ಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ @publicnewskunigal