ಗಂಟಗಾನಹಳ್ಳಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು!
ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ರಸ್ತೆಯ ಗಂಟಗಾನಹಳ್ಳಿ ಗ್ರಾಮದ ಬಳಿ ಗುರುವಾರ ದ್ವಿಚಕ್ರ ವಾಹನ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ ಕುಲುಮೇಪಾಳ್ಯ ಗ್ರಾಮದ ಯಶವಂತ್ (19) ಮೃತಪಟ್ಟ ವಿದ್ಯಾರ್ಥಿ ಕುಣಿಗಲ್ ಪಟ್ಟಣದ ಸಿದ್ದಾರ್ಥ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯಶವಂತ್ ಗುರುವಾರ ತನ್ನ

ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುವ ವೇಳೆ ಗಂಟಗಾನಹಳ್ಳಿ ಗ್ರಾಮದ ಬಳಿ ಕುಣಿಗಲ್ ಕಡೆಯಿಂದ ಎದುರಿಗೆ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿರ್ಲಕ್ಷ್ಯ ಕಾರಣದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ ಅಪಘಾತದ ವೇಳೆ ತಲೆಗೆ ಎಲ್ಮೇಟ್ ಧರಿಸದ ಕಾರಣ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಯಶವಂತ್ ನನ್ನು ಸ್ಥಳಿಯರ ನೆರವಿನಿಂದ ತಕ್ಷಣ ಕುಣಿಗಲ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ ಈ ಸಂಬಂಧ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal