ರಾಜ್ಯ ಹೆದ್ದಾರಿ 33ರ ಕೊತ್ತಗೆರೆ ಗ್ರಾಮದ ಬಳಿ ರಸ್ತೆ ಅಪಘಾತ ಸ್ಥಳದಲ್ಲೆ ಮಹಿಳೆ ಸಾವು ಪ್ರಕರಣ ದಾಖಲು!
ಕುಣಿಗಲ್ ತಾಲ್ಲೂಕಿನ ರಾಜ್ಯ ಹೆದ್ದಾರಿ 33ರ ಕೊತ್ತಗೆರೆ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಕುಣಿಗಲ್ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಗುದ್ದಿ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಾರು ಹರಿದು ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ನಡೆದಿದೆ ಗಂಗಮ್ಮ (49) ಅಪಘಾತದಲ್ಲಿ ಮೃತ ಪಟ್ಟ ಮಹಿಳೆ ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲಿನೆ ನಡೆಸಿದ್ದು ಘಟನೆ ಸಂಬಂಧ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ @publicnewskunigal