ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ!
ಬೆಂಗಳೂರು;-ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ವಿಧಿವಶರಾಗಿದ್ದಾರೆ
ಕಳೆದೊಂದು ತಿಂಗಳಿಂದ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐ.ಸಿ.ಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಆಸ್ಪತ್ರೆಯತ್ತ ಗಣ್ಯರ ಆಗಮನ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ ಆಕ್ಟೊಬರ್ 23 ರಂದು ವಯೋಸಹಜ ಕಾಯಿಲೆ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಾಲಿಸಲಾಗಿತ್ತು ದಾವಣಗೆರೆ ಮೂಲದ ಶಾಮನೂರು ಶಿವಶಂಕರಪ್ಪ 35 ವರ್ಷಗಳ ಕಾಲ ಸಕ್ರಿಯ ರಾಜಕಾರಣ ದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಅಖಿಲ ಭಾರತ ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅವರು ಇಂದು ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ @publicnewskunigal