ಬೆಂಗಳೂರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು!
ಬೆಂಗಳೂರು ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಎಂಬಾತ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಸಮವಸ್ತ್ರದಲ್ಲಿರುವಾಗಲೆ ಬಂಧಿಸಿರುವ ಘಟನೆ ನಡೆದಿದೆ
ದೂರು ಒಂದಕ್ಕೆ ಸಂಬಂಧಿಸಿದಂತೆ ಒರ್ವ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು ನಾಲ್ಕು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ,ಮೈಸೂರು ರಸ್ತೆಯ ಸಿರಸಿ ಸರ್ಕಲ್ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಹಣದ ಸಹಿತ ಪೊಲೀಸಪ್ಪ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದಾನೆ,ಇನ್ನೂ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ವೇಳೆ ಗಾಬರಿಗೊಂಡ ಪೊಲೀಸ್ ಇನ್ಸ್‌ಪೆಕ್ಟರ್ ಗೋವಿಂದರಾಜು ಕೂಗಾಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ವೈರಲ್ ಆಗಿದೆ ಸದ್ಯ ಲೋಕಾಯುಕ್ತ ಅಧಿಕಾರಿಗಳು ಆರೋಪಿ ಪೊಲೀಸ್ ಇನ್ಸ್‌ಪೆಕ್ಟರ್ ಗೋವಿಂದರಾಜನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ @publicnewskunigal