ಎಸ್,ಎಸ್,ಎಲ್,ಸಿ ಪರೀಕ್ಷೆಗೆ ತಾಲ್ಲೂಕು ಆಡಳಿತದ ವತಿಯಿಂದ ಸಕಲ ಸಿದ್ಧತೆಯನ್ನ ಮಾಡಲಾಗಿದೆ ತಹಶೀಲ್ದಾರ್ ಕರಿಯ ನಾಯಕ್!
ಕುಣಿಗಲ್ ಪಟ್ಟಣದ ತಾಲ್ಲೂಕು ಆಡಳಿತ ಸೌಧ ಕಂದಾಯ ಭವನದಲ್ಲಿ ಸೊಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಜರಗಲಿದ್ದು ಈಗಾಗಲೇ ತಾಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಜೊತೆಗೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗಿದೆ ತಾಲೂಕಿನಲ್ಲಿ ಈ ಸಾಲಿನಲ್ಲಿ 3,125 ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದು ಅವರಿಗೆ ಅನಾನುಕೂಲವಾಗದಂತೆ ಸಕಲ ಸಿದ್ಧತೆಯನ್ನ ಕೈಗೊಳ್ಳಲಾಗಿದೆ ತಾಲೂಕಿನ 10 ಕೇಂದ್ರಗಳಲ್ಲಿ ಪರೀಕ್ಷಾ ನಡೆಸಲಿದ್ದು ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜು, ಬಿಜಿಎಸ್, ಜ್ಞಾನಭಾರತಿ,ಸರ್ಕಾರಿ ಕಾಲೇಜು ಭಕ್ತರಹಳ್ಳಿ, ಹುಲಿಯೂರುದುರ್ಗ, ಅಮೃತೂರು,ಯಡಿಯೂರಿನ ಸಿದ್ದಲಿಂಗೇಶ್ವರ ಕಾಲೇಜು. ಉರಿಗದ್ದಿಗೇಶ್ವರ ಪ್ರೌಢಶಾಲಾ ಸ್ಥಳದಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಆರೋಗ್ಯ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನ ಅಳವಡಿಸಲಾಗಿದೆ ಮುಕ್ತ ನ್ಯಾಯ ಸಮತವಾದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದು ವಿದ್ಯಾರ್ಥಿಗಳು ಭಯಪಡದೆ ಮುಕ್ತವಾಗಿ ಪರೀಕ್ಷೆ ಬರೆಯಬೇಕಾಗಿದೆ ಎಂದು ತಿಳಿಸುತ್ತಾ ಬೆಸ್ಕಾಂ ಇಲಾಖೆಯವರು ವಿದ್ಯುತ್ ಸಮಸ್ಯೆ ಉಂಟಾಗದಂತೆ ಕ್ರಮವಹಿಸಬೇಕು ಕೆಎಸ್ಆರ್ ಟಿಸಿ ಬಸ್ಸುಗಳಲ್ಲಿ ಪರೀಕ್ಷೆ ಬರೆಯಲು ಬರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯಕ್ಕೆ ತಲುಪಿಸಲು ಯಾವುದೇ ಅಡಚಣೆ ಉಂಟಾಗದ ರೀತಿಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಈ ಒಂದು ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ವಸಂತ್ ಕುಮಾರ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾ ಮಣಿ,ಅಮೃತೂರು ಪೊಲೀಸು ವೃತ್ತ ನಿರೀಕ್ಷಕರಾದ ನವೀನ್ ಗೌಡ,ಕುಣಿಗಲ್ ಪೊಲೀಸ್ ಇನ್ಸ್ಪೆಕ್ಟರ್ ಎಂ ನಾಯಕ್, ಬೆಸ್ಕಾಂ ಕಾರ್ಯಪಾಲಕ ಅಭಿಯಂತರರಾದ ವೀರಭದ್ರಚಾರ್, ಖಜಾನೆ ಅಧಿಕಾರಿಗಳು, ಪುರಸಭೆ ಆರೋಗ್ಯ ನಿರೀಕ್ಷಕರಾದ ಶ್ರೀಕಾಂತ್, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು. @publicnewskunigal