ರಾಜ್ಯ ಹೆದ್ದಾರಿ 33ರ ಕೊತ್ತಗೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ!
ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33ರ ಕೊತ್ತಗೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಬಜರಂಗದಳದ ಇಬ್ಬರು ಸಕ್ರಿಯ ಕಾರ್ಯಕರ್ತರು ಸಾವನ್ನಪ್ಪಿರುವ ಧಾರುಣ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ ಕುಣಿಗಲ್ ಪಟ್ಟಣದ ನಿವಾಸಿಗಳಾದ 24 ವರ್ಷದ ಆಕಾಶ್ 36 ವರ್ಷದ ಮಂಜುನಾಥ್ ಮೃತ ದುರ್ದೈವಿಗಳು ಮೃತ ಆಕಾಶ್ ಖಾಸಗಿ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇತ್ತೀಚಿಗೆ ಕೆಲಸ ಬಿಟ್ಟಿದ್ದ ಪಿಎಫ್ ಹಣ ಪಡೆಯುವುದಕ್ಕಾಗಿ ಕುಣಿಗಲ್ ನಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ರಾಜ್ಯ ಹೆದ್ದಾರಿ 33 ರ ಕೊತ್ತಗೆರೆ ಗ್ರಾಮದ ಬಳಿ ಎದುರಿನಿಂದ ಬರುತ್ತಿದ್ದ ಬುಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಮತ್ತೊರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ ಇನ್ನೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕುಣಿಗಲ್ ಶಾಸಕ ಡಾ.ರಂಗನಾಥ್ ಮೃತ ಯುವಕರಿಗೆ ಸಂತಾಪ ಸೂಚಿಸಿದ್ದು ಅಪಘಾತ ವಲಯದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ದೂರವಾಣಿ ಮೂಲಕ ಸೂಚಿಸಿದರು ಇನ್ನೂ ಮೃತ ಆಕಾಶ್ ಕೆಲಸದಜೋತೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಮನರಂಜನೆ ಮತ್ತು ಸಮಸ್ಯೆಗಳ ಬಗ್ಗೆ ಬೆಳಕು ಚಲ್ಲುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ @publicnewskunigal