ರಾಷ್ಟ್ರೀಯ ಹೆದ್ದಾರಿ 75ರ ಉರ್ಕೆಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ತಾಯಿ, ಮಗಳು ಸ್ಥಳದಲ್ಲಿ ಸಾವು!
ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಉರ್ಕೆಹಳ್ಳಿ ಬಳಿ ಬೆಂಗಳೂರು ಕಡೆಯಿಂದ ಹಾಸನದ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ರಾಯಚೂರು ಮೂಲದ ಬೆಂಗಳೂರಿನ ನಿವಾಸಿಗಳಾದ ಜಯಮಾಲಾ (60) ರಾಜೇಶ್ವರಿ (40) ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ ಕಾರು ಚಾಲಕ ಮಾರುತಿ ಮತ್ತು ರಾಜೇಶ್ವರಿ ಮಗ ಪ್ರೀತಮ್ ಗಂಭೀರವಾಗಿ ಗಾಯಗೊಂಡಿದ್ದು ಗಾಯಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದೆ ಇನ್ನೂ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ರಾಜೇಶ್ವರಿ ಮಗ ಪ್ರೀತಮ್ ನನ್ನು ಶ್ರವಣಬೆಳಗೊಳದ ಶಾಲೆಗೆ ದಾಖಲಿಸುವ ಸಲುವಾಗಿ ಬೆಂಗಳೂರಿನಿಂದ ತುಮಕೂರಿಗೆ ಬಂದು ಬಳಿಕ ತುಮಕೂರಿನಿಂದ ಕುಣಿಗಲ್ ಮೂಲಕ ಕಾರಿನಲ್ಲಿ ಶ್ರವಣಬೆಳಗೊಳಕ್ಕೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಅಡ್ಡದಿಡ್ಡಿ ಚಲಿಸಿ ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.ಘಟನೆ ಸ್ಥಳಕ್ಕೆ ಕುಣಿಗಲ್ ಪೊಲೀಸರು ಬೇಟಿ ನೀಡಿ ಅಪಘಾತದಿಂದ ಉಂಟಾಗಿದ್ದ ಸಂಚಾರ ದಟ್ಟಣೆ ನಿಯಂತ್ರಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ@publicnewskunigal