ಮಳೆಗಾಗಿ ಪ್ರಾರ್ಥಿಸಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!
ಕುಣಿಗಲ್ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ದೇವಾಲಯದಲ್ಲಿ ಶನಿವಾರ ಶಾಸಕ ಡಾ.ರಂಗನಾಥ್ ವಿಶೇಷ ಪೂಜೆ ಸಲ್ಲಿಸಿ ತಾಲ್ಲೂಕಿನಲ್ಲಿ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ, ತಾಲ್ಲೂಕಿನಲ್ಲಿ ಮಳೆಯ ಕೊರತೆ ಕಾರಣದಿಂದ ಅಂತರ್ಜಲ ಮಟ್ಟ ಕುಸಿತ ಕಂಡಿದ್ದು ಕುಡಿಯುವ ನೀರಿನ ಸಮಸ್ಯೆ ಹಾಗೂ ರೈತರ ಕೊಳವೆಬಾವಿಗಳು ಬತ್ತಿ ನೀರಿನ ಹಾಹಾಕಾರ ಉಂಟಾಗಿ ರೈತರಿಗೆ ಸಂಕಷ್ಟ ಎದುರಾಗಿತ್ತು ಈ ಹಿನ್ನೆಲೆಯಲ್ಲಿ ಮಳೆಗಾಗಿ ಸಂಕಲ್ಪ ಮಾಡಿದ್ದ ಶಾಸಕರು, ತಾಲ್ಲೂಕಿನ ದೇವಾಲಯಗಳಲ್ಲಿ ವಿಶೇಷ ಪೂಜೆ ಹೊಮ ಸಲ್ಲಿಸುವಂತೆ ಕಳೆದೊಂದು ತಿಂಗಳ ಹಿಂದೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು, ಅದರಂತೆ ಯಡಿಯೂರಿನ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಶನಿವಾರ ಮುಂಜಾನೆ ಶಾಸಕ ಡಾ.ರಂಗನಾಥ್ ವಿಶೇಷ ಹೋಮ ಹಾಗೂ ಪೂಜೆಯಲ್ಲಿ ಭಾಗಿಯಾಗಿ ಮಳೆ ಬೆಳೆಯಾಗಿ ರೈತರು. ನಾಡು ಸುಭಿಕ್ಷವಾಗಿರಲಿ ಎಂದು ಸಿದ್ದಲಿಂಗೇಶ್ವರ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು, ಈ ವೇಳೆ ತಹಶೀಲ್ದಾರ್ ಕರಿಯನಾಯ್ಕ್,ದೇವಾಲಯದ ಆಡಳಿತ ಮಂಡಳಿ ಮತ್ತು ನೂರಾರು ಮಂದಿ ಭಕ್ತರು ಕಾಂಗ್ರೆಸ್ ಕಾರ್ಯಕರ್ತರು ಪೂಜೆಯಲ್ಲಿ ಭಾಗಿಯಾಗಿದ್ದರು@publicnewskunigal