ರಾಜ್ಯ ಹೆದ್ದಾರಿ 33 ರಲ್ಲಿ ಭೀಕರ ರಸ್ತೆ ಅಪಘಾತ ಒರ್ವ ಸಾವು ಮೂವರಿಗೆ ಗಂಭೀರ ಗಾಯ!
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ರಾಜೇಂದ್ರಪುರ ಗೇಟ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾನ ನಡೆದಿದೆ ಮಂಡ್ಯ ಮೂಲದವರು ತಮ್ಮ ಸಂಬಂಧಿಕರ ಮದುವೆಗೆ ತುಮಕೂರಿಗೆ ತೆರಳಿದವರು ವಾಪಸ್ ಆಗುವಾಗ ಮಾರ್ಗ ಮಧ್ಯೆ ರಾಜ್ಯ ಹೆದ್ದಾರಿ 33ರ ರಾಜೇಂದ್ರಪುರ ಗೇಟ್ ಬಳಿ ಕಾರಿನ ಟೈಯರ್ ಸ್ಪೋಟಗೊಂಡ
ಹಿನ್ನೆಲೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದಲ್ಲೆ ಇದ್ದ ಡಿವೈಡರಿಗೆ ಡಿಕ್ಕಿ ಹೊಡೆದು ನಂತರ ಪಕ್ಕದಲ್ಲಿದ್ದ ಮರವೊಂದಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಂಡ್ಯ ಪಟ್ಟಣದ ಚಾಮರಾಜನಗರ ನಿವಾಸಿ ಆಕರ್ಶ್ (28) ಸ್ಥಳದಲ್ಲಿ ಸಾವನ್ನದ್ದು ಶಶಾಂಕ್ ಗೌಡ, ಜ್ಞಾನೇಶ್ವರಿ, ಶಶಾಂಕ್ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ ಗಾಯಗೊಂಡ ಶಶಾಂಕ್ ಗೌಡ ಹಾಗೂ ಜ್ಞಾನೇಶ್ವರಿ ಮದುವೆಯಾಗಿ ಕೇವಲ ಮೂರು ತಿಂಗಳಾಗಿತ್ತು ಇಂದು ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯಕ್ಕೆ ತೆರಳುವಾಗ ಘಟನೆ ನಡೆದಿದ್ದು ಗಾಯಾಳುಗಳನ್ನು ಹುಲಿಯೂರುದುರ್ಗ ಹಾಗೂ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ಅಮೃತೂರು ಸಿಪಿಐ ಮಾಧ್ಯನಾಯಕ್ ಹಾಗೂ ಹುಲಿಯೂರುದುರ್ಗ ಪಿಎಸ್ಐ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಫಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಅಫಘಾತದ ಬಳಿಕ ಕಾರಿನಲ್ಲಿದ್ದವರು ಪಕ್ಕದಲ್ಲಿದ್ದ ಹೊಲದಲ್ಲಿ ಬಿದ್ದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಘಟನೆ ಸಂಭಂದ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಆಕರ್ಶ್ ಮೃತದೇಹ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಡಲಾಗಿದೆ @publicnewskunigal
ಸಾವಿನ ಕೂಪವಾಗುತ್ತಿರುವ ರಾಜ್ಯ ಹೆದ್ದಾರಿ33 ರಸ್ತೆ ನಿರ್ವಹಣೆ ಮಾಡುತ್ತಿರುವ ಕೆಶಿಫ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣದಿಂದ ಇತ್ತಿಚೇಗೆ ಅಫಘಾತಗಳು ಹೆಚ್ಚುತ್ತಿದ್ದು ಅಫಘಾತ ವಲಯ ಗುರುತಿಸಿ ನಾಮಫಲಕಗಳನ್ನು ಅಳವಡಿಸಿಲ್ಲ ಯಾವುದೆ ಮಾರ್ಗಸೂಚಿಗಳು ಇಲ್ಲವಾಗಿದ್ದು ಮೂರು ತಿಂಗಳ ಅವಧಿಯಲ್ಲಿ ಆರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ