
ಶಾಸಕ ಡಾ,ರಂಗನಾಥ್ ತಂದೆ ಡಾ,ದೊಡ್ಡಯ್ಯ ಅಂತ್ಯ ಸಂಸ್ಕಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭಾಗಿ!
ಕುಣಿಗಲ್ ಶಾಸಕ ಡಾ,ರಂಗನಾಥ್ ತಂದೆ ಡಾ,ದೊಡ್ಡಯ್ಯ ಅನಾರೋಗ್ಯ ಕಾರಣದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದರು ಅವರ ಅಂತಿಮ ಸಂಸ್ಕಾರವನ್ನು ಹುಟ್ಟುರಾದ ಆಲ್ಕೆರೆ ಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾನ ನೆರವೆರಿಸಲಾಯಿತು,

ಆಲ್ಕೆರೆ ಹೊಸಹಳ್ಳಿ ಗ್ರಾಮದ ಶ್ರೀ ಗುಡ್ಡದ ರಂಗನಾಥ ಸ್ವಾಮಿ ದೇವಾಲಯದ ಬಳಿ ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್, ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಮಾಜಿ ಸಚಿವ ಡಿ.ನಾಗರಾಜಯ್ಯ ಜಿಲ್ಲಾಧಿಕಾರಿ ಶುಭಕಲ್ಯಾಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ಸ್ಪಠಿಕಪುರಿ ಸಂಸ್ಥಾನದ ಶ್ರೀ ನಂಜಾವದೂತ ಸ್ವಾಮಿಜಿ,ಬೆಟ್ಟಹಳ್ಳಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ,ಅರೆಶಂಕರ ಮಠದ ಶ್ರೀ ಸಿದ್ದರಾಮ ಚೈತನ್ಯ ಸ್ವಾಮಿಜಿ, ತಹಶೀಲ್ದಾರ್ ರಶ್ಮಿ ಕಾಂಗ್ರೆಸ್ ಮುಖಂಡ ಮುರುಳಿಧರ ಹಾಲಪ್ಪ ಮಾಜಿ ಶಾಸಕ ಬಿ.ಬಿ ರಾಮಸ್ವಾಮಿಗೌಡ ಮಾಜಿ ಶಾಸಕ ಎಚ್.ನಿಂಗಪ್ಪ ಮಾಗಡಿ ತಾಲ್ಲೂಕಿನ ಮಾಜಿ ಶಾಸಕ ಎ,ಮಂಜು ಬಿಜೆಪಿ ಮುಖಂಡ ರಾಜೇಶ್ ಗೌಡ ಜೆಡಿಎಸ್ ಮುಖಂಡ ಬಿ.ಎನ್ ಜಗದೀಶ್ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕುಟುಂಬದವರು ಡಾ.ದೊಡ್ಡಯ್ಯರವರ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿ ಅಂತಿಮ ದರ್ಶನ ಪಡೆದರು @publicnewskunigal