
ಕಣಿಗಲ್;-ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ದೊಡ್ಡಮಾವತ್ತೂರು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ತಿಪಟೂರು ಮೂಲದ ಬೆಸ್ಕಾಂ ನೌಕರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಶನಿವಾರ ನಡೆದಿದೆ!

ತಿಪಟೂರಿನಿಂದ ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ತೆರಳುವ ಮಾರ್ಗ ಮದ್ಯೆ ದೊಡ್ಡಮಾವತ್ತೂರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆಯ ಪಕ್ಕದ ತೆಂಗಿನ ಮರಕ್ಕೆ ಅಪ್ಪಳಿಸಿ ಹಳ್ಳಕ್ಕೆ ಬಿದ್ದ ಹಿನ್ನೆಲೆ ಕಾರು ಚಾಲಕ ಸಿ.ಎನ್ ಹರೀಶ್ (37) ಸ್ಥಳದಲ್ಲೇ ಸಾವನಪ್ಪಿದ್ದಾನೆ,ತಿಪಟೂರು ಬೆಸ್ಕಾಂ ಇಲಾಖೆಯಲ್ಲಿ ಹಿರಿಯ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ ಸ್ಥಳಕ್ಕೆ ಅಮೃತೂರು ವೃತ್ತ ನಿರೀಕ್ಷಕ ಮಾಧ್ಯ ನಾಯಕ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal