
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣದಡಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ನನ್ನು ಜಿಲ್ಲಾ ಆರೋಗ್ಯಧಿಕಾರಿ ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದಾರೆ!
ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲ ದಿನಗಳ ಹಿಂದೆ ಚಿಕಿತ್ಸೆಗೆ ಬಂದಿದ್ದ ರೋಗಿಗಳ ಬಳಿ ಲ್ಯಾಬ್ ಟೆಕ್ನಿಷಿಯನ್ ರಾಘವೇಂದ್ರ ಎಂಬಾತ 300 ರೂಪಾಯಿಗಳನ್ನು ಫೋನ್ ಪೇ ಮೂಲಕ ಲಂಚ ಪಡೆದಿದ್ದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ತಾಲ್ಲೂಕು ಬಜರಂಗದಳದ ಕಾರ್ಯಕರ್ತರು ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್ ಬಾಬು ಸೇರಿದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆಸ್ಪತ್ರೆಗೆ ಬರುವ ರೋಗಿಗಳ ಬಳಿ ಲಂಚ ಪಡೆಯುತ್ತಿರುವ ಬಗ್ಗೆ ದಾಖಲೆ ಸಹಿತ ದೂರು ನೀಡಿದರು ಈ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾ ಆರೋಗ್ಯಧಿಕಾರಿ ಡಾ.ಚಂದ್ರಶೇಖರ್ ರವರು ಎನ್,ಹೆಚ್,ಎಂ ಗುತ್ತಿಗೆ ಆಧಾರದಲ್ಲಿ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಹಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಘವೇಂದ್ರ,ಎ ರವರನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಸೇವೆಯಿಂದ ವಜಾಗೊಳಿಸಿ ಶುಕ್ರವಾರ ಆದೇಶಿಸಿದ್ದಾರೆ @publicnewskunigal