
ರಸ್ತೆ ದಾಟುತ್ತಿದ್ದ ಮಗುವಿಗೆ ಅಪಘಾತವಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾದರು ಆಸ್ಪತ್ರೆಯ ಕಡೆಗೆ ತಲೆ ಹಾಕದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮುಖ್ಯ ಶಿಕ್ಷಕಿ!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹಳೆಪೇಟೆಯ ಕೆ.ಪಿ.ಎಸ್.ಸಿ ಶಾಲೆಯ ಮುಂಭಾಗ ರಸ್ತೆ ದಾಟುತ್ತಿದ್ದ ಮಗುವಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಮಗುವಿನ ಕಾಲು ಮುರಿದಿದ್ದು ಗಂಭೀರವಾಗಿ ಗಾಯಗೊಂಡು ತುಮಕೂರು ಜಿಲ್ಲಾ ಆಸ್ಪತ್ರೆಗೆ ಸೇರಿರುವ ಮಗುವನ್ನು ಬೇಟಿಯಾದ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಆರೋಗ್ಯ ವಿಚಾರಿಸಿ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ,
ಅಪಘಾತದಲ್ಲಿ ಗಾಯಗೊಂಡಿದ್ದ ಮಗುವನ್ನು ಶಾಲೆಯ ಶಿಕ್ಷಕಿ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಶುಕ್ರವಾರ 3-30ರ ಸಮಯದಲ್ಲಿ ಶಾಲೆಯ ಮುಂಭಾಗದ ರಸ್ತೆಯಲ್ಲಿ ರಸ್ತೆ ದಾಟಲು ಶಾಲೆಯ ಆಯಾ ಜೋತೆಗೆ ನಿಂತಿದ್ದ ಮಗುವಿಗೆ ಹುಲಿಯೂರುದುರ್ಗ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ಮಗುವಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪಾರಾರಿಯಾಗಿದ್ದಾನೆ ಹಂಗರಹಳ್ಳಿ ಗ್ರಾಮದ ಐದು ವರ್ಷದ ಸಿಂಚನ ಅಪಘಾತದಲ್ಲಿ ಗಾಯಗೊಂಡ ಮಗು ಹುಲಿಯೂರುದುರ್ಗ ಕೆ.ಪಿ.ಎಸ್.ಸಿ ಶಾಲೆಯಲ್ಲಿ ಎಲ್.ಕೆ.ಜಿ ವ್ಯಾಸಂಗ ಮಾಡುತ್ತಿತ್ತು ಎಂದು ತಿಳಿದು ಬಂದಿದೆ ಶಿಕ್ಷಕರ ನಿರ್ಲಕ್ಷ್ಯ ಕಾರಣದಿಂದ ಮಗುವಿಗೆ ಅಪಘಾತವಾಗಿದೆ ಪೊಷಕರು ಬರುವ ವರೆಗೆ ಶಾಲೆಯಲ್ಲಿ ಮಕ್ಕಳನ್ನು ಇರಿಸಿಕೊಳ್ಳುವ ಬದಲು ರಸ್ತೆಯಲ್ಲಿ ತಂದು ಬಿಡುತ್ತಿದ್ದಾರೆ ಇದೆ ಕಾರಣಕ್ಕೆ ಅಪಘಾತ ಸಂಭವಿಸಿದೆ ಎಂದು ಸ್ಥಳಿಯರು ಆರೊಪಿಸಿದ್ದು ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಆಸ್ಪತ್ರೆಯ ಕಡೆ ತಲೆ ಹಾಕದ ಅಧಿಕಾರಿಗಳು ಶಾಲೆಯ ಶಿಕ್ಷಕರ ಬೇಜವಾಬ್ದಾರಿಯ ಕಾರಣದಿಂದ ಕಾಲು ಮುರಿತಕ್ಕೆ ಒಳಗಾಗಿ ಮಗು ಆಸ್ಪತ್ರೆಯನ್ನು ಸೆರಿದೆ ಆದರೆ ಕ್ಷೇತ್ರ ಶಿಕ್ಷಣಾಧಿಕಾರಿ ಯಾಗಲಿ ಶಾಲೆಯ ಮುಖ್ಯ ಶಿಕ್ಷಕಿಯಾಗಲಿ ಇದುವರೆಗೂ ಆಸ್ಪತ್ರೆಯ ಕಡೆಗೆ ತಲೆ ಹಾಕಿ ಮಗುವಿನ ಆರೋಗ್ಯ ವಿಚಾರಿಸಿಲ್ಲ ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ @publicnewskunigal