
ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಪತ್ನಿಯ ಕಣ್ಣೆದುರಲ್ಲೆ ಒದ್ದಾಡಿ ಪ್ರಾಣ ಬಿಟ್ಟ ಪತಿ !
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ಕೃಷ್ಣಪ್ಪನಕೊಪ್ಪಲು ಬಳಿ ಕುಣಿಗಲ್ ಕಡೆಗೆ ತೆರಳುತ್ತಿದ್ದ ಆಟೊ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಆಟೊದಲ್ಲಿ ಕುಳಿತಿದ್ದ ಮಠದದೊಡ್ಡಿ ಗ್ರಾಮದ ಪುಟ್ಟಸ್ವಾಮಿ (55) ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ ಆಟೋದಲ್ಲಿ ಹೆಚ್ಚು ಜನರನ್ನು ತುಂಬಿ ಕರೆದೊಯ್ಯುವ ವೇಳೆ ಈ ಅವಘಡ ಸಂಭವಿಸಿದೆ ಅಪಘಾತವಾಗಿ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ರಕ್ತ ಸೊರುತ್ತಿದ್ದನ್ನು ಗಮನಿಸಿದ ಸ್ಥಳಿಯರು
ತಕ್ಷಣ 112 ಆಂಬುಲೆನ್ಸ್ ಸೇವೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಆದರೆ ಒಂದು ಗಟೆಯಾದರು ಸ್ಥಳಕ್ಕೆ ಆಂಬುಲೆನ್ಸ್ ಬಾರದ ಕಾರಣ ಪತ್ನಿಯ ಎದುರಲ್ಲೆ ಪತಿಯ ಪ್ರಾಣ ಪಕ್ಷಿ ಹಾರಿಹೊಗಿದೆ ತಕ್ಷಣ ಚಿಕಿತ್ಸೆ ದೊರೆತಿದ್ದರೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಬದುಕುತ್ತಿದ್ದ ಎಂದು ಸ್ಥಳಿಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಇತ್ತಿಚೇಗೆ ಹುಲಿಯೂರುದುರ್ಗ ಭಾಗದಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಗಾಯಾಳುಗಳು ಪ್ರಾಣ ಕಳೆದುಕೊಳ್ಳುವಂತಾಗಿದೆ ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ ಅಪಘಾತದಲ್ಲಿ ಗಾಯಗೊಂಡವರಿಗೆ ಸಕಾಲದಲ್ಲಿ ಆಂಬುಲೆನ್ಸ್ ಸಿಗುವಂತೆ ವ್ಯವಸ್ಥೆ ಕಲ್ಪಿಸಬೇಕಾಗಿದೆ @publicnewskunigal