
ಶ್ರೀ ಹೆಬ್ಬಾರಮ್ಮ ದೇವಿಯ ನೂತನ ದೇವಾಲಯ ಉದ್ಘಾಟನೆ ಹಾಗೂ ರಾಜಗೋಪುರಕ್ಕೆ ಕಲಶ ಪ್ರತಿಷ್ಠಾಪನೆ ನೆರವೆರಿಸಿದ ಶ್ರೀ ಸ್ವಾಮಿ ವಿರೇಶಾನಂದ ಸರಸ್ವತಿ ಸ್ವಾಮೀಜಿ!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಉಜ್ಜನಿ ಗ್ರಾಮದ ಶ್ರೀ ಹೆಬ್ಬಾರಮ್ಮ ದೇವಿಯ ನೂತನ ದೇವಾಲಯ ಉದ್ಘಾಟನೆ ಹಾಗೂ ರಾಜಗೋಪುರಕ್ಕೆ ಕಲಶ ಪ್ರತಿಷ್ಠಾಪನೆ ಕುಂಭಾಭಿಷೇಕ ಕಾರ್ಯಕ್ರಮವನ್ನು ತುಮಕೂರಿನ ಶ್ರೀ ರಾಮಕೃಷ್ಣವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ವಿರೇಶಾನಂದ ಸರಸ್ವತಿ ಸ್ವಾಮೀಜಿಯವರು ಮಂಗಳವಾರ ನೂತನ ದೇವಾಲಯದ ಉದ್ಘಾಟನೆ ನೆರವೇರಿಸಿ ಬಳಿಕ ರಾಜಗೋಪುರದ ಕಲಶಕ್ಕೆ ಕುಂಭಾಭಿಷೇಕ ನೆರವೇರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತಾಯಂದಿರಿಗೆ ಬಾಗಿನ ನೀಡಿ

ಬಳಿಕ ಭಕ್ತರಿಗೆ ಆಶೀರ್ವಚನ ನೀಡಿ ನಂತರ ಮಾತನಾಡಿದ ಅವರು ಸಾವಿರಾರು ವರ್ಷಗಳಿಂದ ಧಾರ್ಮಿಕತೆಯ ನೆಲೆಗಟ್ಟು ನಿಂತಿರುವುದೆ ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೂಡಿ ಧಾರ್ಮಿಕ ಕೈಂಕರ್ಯ ಹಾಗೂ ಪರಂಪರೆಯನ್ನು ಉಳಿಸಿಕೊಂಡು ಬಂದಿರುವ ಕಾರಣ ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ನಂಬಿಕೆ ಎಂಬುದು ಇನ್ನೂ ಗಟ್ಟಿಯಾಗಿ ಉಳಿದಿದೆ ಎಂದರು ಇದೆ ವೇಳೆ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ವಿರೇಶಾನಂದ ಸರಸ್ವತಿ ಸ್ವಾಮೀಜಿಯವರನ್ನು ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿದರು ಕಾರ್ಯಕ್ರಮದಲ್ಲಿ ಶ್ರೀ ಹೆಬ್ಬಾರಮ್ಮ ದೇವಿಯ ಗುಡ್ಡರು ದೇವಾಲಯದ ಕನ್ವಿನರ್ ಹಾಗೂ ಸ್ಥಳಿಯ ಮುಖಂಡರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು @publicnewskunigal