
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದ್ವಿತೀಯ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು!
ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಗರಹಳ್ಳಿ ಗ್ರಾಮದ ನಾಗರತ್ನ ಹಾಗೂ ಚಂದ್ರಹಾಸ ದಂಪತಿ ಪುತ್ರಿ (18) ವರ್ಷದ ಜಯಶ್ರೀ ಹೊಟ್ಟೆನೋವು ತಾಳಲಾರದೆ ಮಂಗಳವಾರ ತಡರಾತ್ರಿ ಸಾವನ್ನಪ್ಪಿರುವ ಘಟನೆಯ ನಡೆದಿದೆ,ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಜಯಶ್ರೀ ಯನ್ನು ಸ್ಥಳಿಯರ ನೆರವಿನೊಂದಿಗೆ ಕುಟುಂಬಸ್ಥರು ಕುಣಿಗಲ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರು ಕ್ರಾಸ್ ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಯುವತಿ ಸಾವನ್ನಪ್ಪಿರುವುದಾಗಿ ವೈದ್ಯರು ಧೃಡಪಡಿಸಿದ್ದಾರೆ
ಬಡತನ ಮೆಟ್ಟಿನಿಲ್ಲುವ ಸಲುವಾಗಿ ಉತ್ತಮ ವಿದ್ಯಾಭ್ಯಾಸ ಮಾಡುತ್ತಿದ್ದ ಜಯಶ್ರೀ ಕಳೆದ ಎರಡು ವರ್ಷಗಳಿಂದ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ ಯುವತಿ ಹೊಟ್ಟೆ ನೋವಿನಿಂದ ಸಾವನ್ನಪ್ಪಿರುವುದು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ ಬಡ ಕುಟುಂಬದಲ್ಲಿ ಹುಟ್ಟಿ ಪೋಷಕರಿಗೆ ಆಶ್ರಯವಾಗಬೇಕಿದ್ದ ಎದೆ ಎತ್ತರಕ್ಕೆ ಬೆಳೆದಿದ್ದ ಮಗಳು ಕಣ್ಣೆದುರೆ ಆನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿರುವುದನ್ನು ಕಂಡು ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ @publicnewskunigal