ಉಜ್ಜನಿ ಗ್ರಾಮ ಪಂಚಾಯ್ತಿಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ಗರಿ!

Spread the love

ಉಜ್ಜನಿ ಗ್ರಾಮ ಪಂಚಾಯಲ್ಲಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ ಕಾರಣ 2023-24 ನೇ ಸಾಲಿನ ಅತ್ಯುತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿಯ ಗರಿ ಲಭಿಸಿದೆ!

ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಉಜ್ಜನಿ ಗ್ರಾಮ ಪಂಚಾಯ್ತಿಗೆ 2023-24 ನೇ ಸಾಲಿನ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವ ಕಾರಣ ಅತ್ಯುತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿಯ ಲಭಿಸಿದೆ,ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹೆಚ್ಚು ಮಾನವ ದಿನಗಳ ಸೃಜನೆ ಹಾಗೂ ಯೋಜನೆಯ ಮೂಲಕ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಸುಮಾರು 64 ಸಾವಿರ ಮಾನವದಿನಗಳ ಸೃಜನೆ ಮಾಡುವ ಮೂಲಕ

ಕೃಷಿ.ತೋಟಗಾರಿಕೆ.ರೇಷ್ಮೆ.ಕೊಟ್ಟಿಗೆ ನಿರ್ಮಾಣ.ಶಾಲೆಗಳ ಅಭಿವೃದ್ದಿ.ರಸ್ತೆ ಚರಂಡಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಯೋಜನೆಯಡಿ ಅಭಿವೃದ್ದಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಮೂಲಕ ಮಂಚೂಣಿಯಲ್ಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಡಾ,ಬಿ,ಆರ್ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ 2025ನೇ ಸಾಲಿನ ನರೇಗಾ ಹಬ್ಬದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶಸ್ತಿ ಪ್ರಧಾನ ಮಾಡಿದ್ದು ತುಮಕೂರು ಜಿಲ್ಲಾ ಪಂಚಾಯತ್ ಸಿ.ಇ.ಒ ಜಿ ಪ್ರಭು ಹಾಗೂ ನರೇಗಾ ಯೋಜನೆಯ ತಾಲ್ಲೂಕು ಸಹಾಯಕ ನಿರ್ದೇಶಕ ಕಾಂತರಾಜು ಗ್ರಾಮ ಪಂಚಾಯತಿ ಅಧ್ಯಕ್ಷೆ ನಿಂಗಮ್ಮ ಉಪಾಧ್ಯಕ್ಷೆ ಮಹಾಲಕ್ಷ್ಮಮ್ಮ ಸದಸ್ಯರಾದ ಸುಮಲತಾ ಚನ್ನೆಗೌಡ, ಜಯಣ್ಣ, ಮರಿಯಪ್ಪ, ಪುಟ್ಟಸ್ವಾಮಯ್ಯ,ಸುಶ್ಮ ಸುರೇಶ್, ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಯ್ಯ ಈ ವೇಳೆ ಉಪಸ್ಥಿತರಿದ್ದರು @publicnewskunigal