
ಮಾರ್ಚ್ 16 ರಿಂದ ಹಳೆವೂರು ಗ್ರಾಮದ ಶ್ರೀ ಹುಲಿಯೂರಮ್ಮ ದೇವಿಯ ಜಾತ್ರಮಹೋತ್ಸವದ ಹಿನ್ನೆಲೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಡಾ.ರಂಗನಾಥ್ ಸೂಚನೆ!
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಇತಿಹಾಸ ಪ್ರಸಿದ್ಧ ಹಳೆವೂರು ಗ್ರಾಮದ ಶ್ರೀ ಹುಲಿಯೂರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಕುಣಿಗಲ್ ಶಾಸಕ ಡಾ.ರಂಗನಾಥ್ ನೇತೃತ್ವದಲ್ಲಿ ಶುಕ್ರವಾರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು ಮಾರ್ಚ್ 16 ರಿಂದ 21 ರ ವರೆಗೆ ಜಾತ್ರಮಹೋತ್ಸವ ನಡೆಯಲಿದ್ದು ಕಾರ್ಯಕ್ರಮದಲ್ಲಿ
ಲಕ್ಷಾಂತರ ಭಕ್ತರು ಭಾಗಿಯಾಗುವ ನಿರೀಕ್ಷೆ ಇರುವ ಕಾರಣ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಹಾಗೂ ಭದ್ರತೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಜಾತ್ರಾ ಮಹೋತ್ಸವದಲ್ಲಿ ಯಾವುದೆ ಲೋಪದೋಷಗಳು ಬಾರದ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಶಾಸಕ ಡಾ.ರಂಗನಾಥ್ ಸಭೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳಿಗೆ ಸೂಚಿಸಿದರು ಸಭೆಯಲ್ಲಿ ತಹಶೀಲ್ದಾರ್ ರಶ್ಮಿ ದೇವಾಲಯದ ಕಾರ್ಯನಿರ್ವಣ ಅಧಿಕಾರಿ ಮಂಜೇಶ್ ಹಳೆವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿಚನಹಳ್ಳಿ ಶ್ರೀನಿವಾಸ್.ಸ್ಥಳೀಯ ಮುಖಂಡರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು@publicnewskunigal