
ಹುಟ್ಟುಹಬ್ಬದ ಪ್ರಯುಕ್ತ ಕುಟುಂಬ ಸಹಿತ ಎಡೆಯೂರು ಶ್ರೀ ಸಿದ್ದಲಿಂಗೇಶ್ವರನ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ವೈ ಕುಟುಂಬಸ್ಥರು!
ಕುಣಿಗಲ್ ತಾಲೂಕಿನ ಇತಿಹಾಸ ಪ್ರಸಿದ್ಧ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಗುರುವಾರ ಕುಟುಂಬ ಸಹಿತ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನೆ ದೇವಾರದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತ್ರಿಕಾಲ ರುದ್ರಾಭಿಷೇಕ ನೆರವೇರಿಸಿದರು ಪ್ರತಿವರ್ಷ ಹುಟ್ಟುಹಬ್ಬದಂದು ಯಡಿಯೂರಿನ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸುವುದು ವಿಶೇಷ
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಸಂಸದ ಬಿ.ವೈ ರಾಘವೇಂದ್ರ ಹಾಗೂ ಕುಟುಂಬಸ್ಥರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು ಹುಟ್ಟುಹಬ್ಬಕ್ಕೆ ಶುಭ ಕೋರಿದ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ಸನ್ನಿಧಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸುವುದಕ್ಕೂ ಮುನ್ನ ದೇವಾಲಯಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದು ನಂತರ ಬಿ.ಎಸ್ ಯಡಿಯೂರಪ್ಪರವರಿಗೆ ಸಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು ಈ ವೇಳೆ ತಾಲ್ಲೂಕು ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್ ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು @publicnewskunigal