
ರಸ್ತೆ ಅಪಘಾತದಲ್ಲಿ ಕರ್ತವ್ಯ ನಿರತ ಪೊಲೀಸ್ ಮುಖ್ಯ ಪೇದೆ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ!
ಕುಣಿಗಲ್ ಪಟ್ಟಣದ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉರ್ಕೆಹಳ್ಳಿ ಸಮಿಪ ಬೈಪಾಸ್ ರಸ್ತೆಯಲ್ಲಿ ನಿಂತಿದ್ದ ವಾಹನವನ್ನು ತೆರವು ಮಾಡಿ ವಾಪಸ್ ಹಾಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯ 112 ವಾಹನದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ನಿಂಗರಾಜು (46) ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಡಲಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ಸೆರಿದಂತೆ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ ತುರುವೆಕೆರೆ ತಾಲ್ಲೂಕಿನ ತಾವರೆಕೆರೆ ಗ್ರಾಮದ ನಿಂಗರಾಜು 2005 ರಲ್ಲಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯಕ್ಕೆ ಸೇರಿದ್ದು ಜಿಲ್ಲೆಯ ಹಲವು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು ಪ್ರಸ್ತುತ ಕುಣಿಗಲ್ ಪೊಲೀಸ್ ಠಾಣೆಯ 112 ಗಸ್ತು ವಾಹನದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಂಗರಾಜು ಇಲಾಖೆಯಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಂಗರಾಜು ರವರಿಗೆ ಪಟ್ಟಣದ ನಾಗರೀಕರು ಸಂತಾಪ ಸೂಚಿಸಿದ್ದಾರೆ @publicnewskunigal