
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ರಸ್ತೆ ಅಪಘಾತ ಒರ್ವ ಸಾವು ಮತ್ತೊರನಿಗೆ ಗಂಭೀರ ಗಾಯ!
ಕುಣಿಗಲ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 75ರ ಉಗಿಬಂಡಿ ರೆಸ್ಟೋರೆಂಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಚನ್ನರಾಯಪಟ್ಟಣ ತಾಲ್ಲೂಕಿನ ಹಳೆಬೆಳಗುಳ ಗ್ರಾಮದ ಮಂಜುನಾಥ(40) ಸ್ಥಳದಲ್ಲೆ ಸಾವನ್ನಪ್ಪಿದ್ದು ಮತ್ತೊರ್ವ ಕೀರ್ತಿ ಎಂಬುವವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಶನಿವಾರ ನಡೆದಿದೆ ಸ್ಥಳಕ್ಕೆ ಕುಣಿಗಲ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಚನ್ನರಾಯಪಟ್ಟಣದಿಂದ ಮಂಜುನಾಥ್ ಹಾಗೂ ಕೀರ್ತಿ ಶನಿವಾರ ಬೆಂಗಳೂರಿಗೆ ತೆರಳುವ ವೇಳೆ ಮಾರ್ಗಮಧ್ಯೆ ರಾಷ್ಟ್ರೀಯ ಹೆದ್ದಾರಿ 75ರ ಕುಣಿಗಲ್ ಬೈಪಾಸ್ ನ ಉಗಿಬಂಡಿ ರೆಸ್ಟೋರೆಂಟ್ ಮುಂಭಾಗ ಚಲಿಸುತ್ತಿದ್ದ ಲಾರಿಯನ್ನು ಹಿಂದಿಕ್ಕುವ ವೇಳೆ ಅವಘಡ ಸಂಭವಿಸಿದೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಗಾಯಾಳು ಕೀರ್ತಿ ಎಂಬುವವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದೆ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal