ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಕರಣ ದಾಖಲು!
ಕುಣಿಗಲ್ ತಾಲ್ಲೂಕಿನ ಯಡಿಯೂರು ವ್ಯಾಪ್ತಿಯ ನಾಗಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಕಳೆದ ಇಪ್ಪತ್ತು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ನಾಗಸಂದ್ರ ಗ್ರಾಮದ ಶಶಿಕುಮಾರ್ (40) ನೇಣು ಬಿಗಿದುಕೊಂಡ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೆರಿಯಲ್ಲಿ ನಡೆದ ಸಭೆಗೆ ತೆರಳಿದ್ದ ಶಶಿಕುಮಾರ್ ಸಭೆ ಮುಗಿದ ಬಳಿಕ ಸಂಜೆ ವಾಪಸ್ ಗ್ರಾಮಕ್ಕೆ ಬಂದಿದ್ದಾನೆ ಬಳಿಕ ದೊಡ್ಡ ಮಧುರೆ ಕಾವಲ್ ಬಳಿಯ ಅರಣ್ಯ ಪ್ರದೇಶದ ಬಳಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿಯಲ್ಲಿ ಶಶಿಕುಮಾರ್ ನ ಮೃತದೇಹ ಪತ್ತೆಯಾಗಿದ್ದು ಸ್ಥಳಿಯರ ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಅಮೃತೂರು ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಕುಟುಂಬಸ್ಥರ ದೂರು ಹಿನ್ನೆಲೆ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ @publicnewskunigal