
ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಪ್ರಕರಣ ಕುರಿತು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರ್ಕಾರ ಆದೇಶ!
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಕರಣ ಸಂಖ್ಯೆ 39/2025 ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರೆ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರ ಹಿರಿಯ ಪೊಲೀಸ್ ಅಧಿಕಾರಿ ಡಾ.ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ಎಸ್.ಐ.ಟಿ ತಂಡವನ್ನು ರಚಿಸಿದೆ
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷಿಚೌಧರಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಬರೆದ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ವಕೀಲರ ಮೂಲಕ ನ್ಯಾಯಲಯಕ್ಕೆ ತೆರಳಿ ಹೇಳಿಕೆ ದಾಖಲಿಸಿದ್ದು ಮಾಧ್ಯಮಗಳಲ್ಲಿ ಮನುಷ್ಯರೊಬ್ಬರ ತಲೆಬುರುಡೆ ದೊರಕಿರುವ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು ಮಹಿಳಾ ಆಯೋಗವು ಗಭೀರವಾಗಿ ಪರಿಗಣಿಸಿದ್ದು ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ಹೇಳಿಕೆಯಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಗಂಭೀರ ಸ್ವರೂಪದ ದೌರ್ಜನ್ಯ.ಹತ್ಯೆ.

ಅತ್ಯಾಚಾರ.ಅಸ್ವಾಭಾವಿಕವಾದ ಸಾವು.ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ತಿಳಿಸಲಾಗಿದ್ದು ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು ಅಸ್ವಾಭಾವಿಕವಾದ ಸಾವು/ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಎಸ್.ಐ.ಟಿ ರಚಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗುವ ಇತರೆ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಯನ್ನು ಈ ವಿಷೇಶ ತನಿಖಾ ತಂಡಕ್ಕೆ ವರ್ಗಾಯಿಸುವಂತೆ ವಿಷೇಶ ತನಿಖಾ ತಂಡವು ತನಿಖೆಯ ಪ್ರಗತಿಯನ್ನು ಆಗಿಂದಾಗ್ಗೆ ಡಿ.ಜಿ ಮತ್ತು ಐಜಿಪಿ ರವರಿಗೆ ವರದಿ ಮಾಡುವಂತೆ ವಿಷೇಶ ತನಿಖಾ ತಂಡವು ಮೇಲ್ಕಂಡಂತೆ ದಾಖಲಾಗಿರುವ ಹಾಗೂ ಇದರ ಸಂಬಂಧ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗೂವ ಪ್ರಕರಣಗಳ ಸಮಗ್ರ ತನಿಖೆ ನಡೆಸಿ ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ @publicnewskunigal