ನಾಡಪ್ರಭು ಕೆಂಪೇಗೌಡರ ಆಳ್ವಿಕೆಯ ಐತಿಹಾಸಿಕ ಪ್ರವಾಸಿತಾಣ ಹುತ್ರಿದುರ್ಗ ಬೆಟ್ಟದ ಅಭಿವೃದ್ಧಗಾಗಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಡಾ.ಸಿ.ಎನ್ ಮಂಜುನಾಥ್!
ಬೆಂಗಳೂರು;-ಕುಣಿಗಲ್ ತಾಲ್ಲೂಕಿನ ಐತಿಹಾಸಿಕ ಪ್ರವಾಸಿತಾಣ ಹುತ್ರಿದುರ್ಗ ಬೆಟ್ಟದ ಕೋಟೆಯನ್ನು ಸ್ವದೇಶಿ ದರ್ಶನ್ 2.0’ ಅಡಿಯಲ್ಲಿ ಪ್ರವಾಸಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ರವರು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿದ್ದಾರೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಕುಣಿಗಲ್ ತಾಲ್ಲೂಕಿನ ನಾಡಪ್ರಭು ಕೆಂಪೇಗೌಡರ ಆಳ್ವಿಕೆಯ ಐತಿಹಾಸಿಕ ಪ್ರವಾಸಿತಾಣ ಹುತ್ರಿದುರ್ಗ ಕೋಟೆಯನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವುದರಿಂದ ನಮ್ಮ ಪರಂಪರೆಯನ್ನು ಬೆಳೆಸಿದಂತಾಗುತ್ತದೆ ಜೊತೆಗೆ ಕ್ಷೇತ್ರಕ್ಕೆ ಅಂತಾರಾಷ್ಟ್ರೀಯ ಮನ್ನಣೆ ದೊರಕಲಿದ್ದು ಈ ಮೂಲಕ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಸಹಕಾರಿಯಾಗಲಿದೆ ಇದರಿಂದಾಗಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಸೇರಿದಂತೆ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೂ ಸಹಕಾರಿಯಾಗಲಿದೆ ಎಂದು ಸಂಸದರು ಸಚಿವರಿಗೆ ಮನವರಿಕೆ ಮಾಡಿದ್ದು ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಕೇಂದ್ರ ಸಚಿವರು ಆದಷ್ಟು ಬೇಗ ಆದ್ಯತೆ ಮೇರೆಗೆ ಈ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ @publicnewskunigal