ಡಿ.ಕೆ.ಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಹಾತ್ಮಗಾಂಧಿ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ಉಚಿತ ತರಬೇತಿ ಪಡೆಯಲು ಪ್ರವೇಶ ಪರೀಕ್ಷೆ!
ಕುಣಿಗಲ್ ಪಟ್ಟಣದ ಮಹಾತ್ಮಗಾಂಧಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ಡಿ.ಕೆ.ಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ಆಯ್ದ ನೂರು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವ ಉದ್ದೇಶದಿಂದ ಆಯೋಜಿಸಲಾಗಿದ್ದ ಪ್ರವೇಶ ಪರೀಕ್ಷೆಯಲ್ಲಿ 350 ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು ಈ ವೇಳೆ ಕಾಲೇಜಿಗೆ ಆಗಮಿಸಿದ ಶಾಸಕ ಡಾ.ರಂಗನಾಥ್ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ ಗ್ರಾಮೀಣ ಪ್ರದೇಶದ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪ್ರವೇಶ ಪರೀಕ್ಷೆಗಳನ್ನು ಎದುರಿಸಬೇಕಾಗಿದ್ದು ತಾಲ್ಲೂಕಿನಲ್ಲಿ
ಯಾವುದೆ ತರಬೇತಿ ಕೇಂದ್ರಗಳಿಲ್ಲದ ಕಾರಣ ತರಬೇತಿ ಪಡೆಯಲು ಬೆಂಗಳೂರು ಅಥವಾ ಜಿಲ್ಲಾ ಕೇಂದ್ರಕ್ಕೆ ತೆರಳಬೇಕಾಗಿದ್ದು ಇದನ್ನು ಅರಿತ ಮಾಜಿ ಸಂಸದ ಡಿ.ಕೆ ಸುರೇಶ್ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಡಿ.ಕೆ.ಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಇಂದು ಪ್ರವೇಶ ಪರೀಕ್ಷೆ ನಡೆಸಲಾಗಿದ್ದು ನೂರಾರು ವಿದ್ಯಾರ್ಥಿಗಳು ಪ್ರರೀಕ್ಷೆಯಲ್ಲಿ ಭಾಗಿಯಾಗಿ ಪರೀಕ್ಷೆ ಬರೆದಿದ್ದಾರೆ ಅವರಲ್ಲಿ ಆಯ್ದ ನೂರು ಮಕ್ಕಳಿಗೆ ಮುಂಬರುವ ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ತರಬೇತಿ ನೀಡಲಾಗುವುದು ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು ಈ ವೇಳೆ ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಮರಿಯಪ್ಪ.ಕೆ.ಪಿ.ಸಿ.ಸಿ ಸದಸ್ಯ ಬೇಗೂರು ನಾರಾಯಣ್.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ.ಬೇಗೂರು ಮೂರ್ತಿ.ಮೋಹನ್.ಸಿಪಿಐ ನವೀನ್‌ಗೌಡ.ಅಮೃತೂರು ವೃತ್ತ ನಿರೀಕ್ಷಕ ಮಾಧ್ಯನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ಧರು @publicnewskunigal