ರೈತರಿಗೆ ಅಧಿಕ ಬೆಲೆಗೆ ರಸಗೊಬ್ಬರ ಮಾರಾಟ ಅಂಗಡಿ ಮಳಿಗೆ ವಿರುದ್ದ ಕ್ರಮಕ್ಕೆ ರೈತರ ಒತ್ತಾಯ!
ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಗವಿಮಠದಲ್ಲಿರುವ ಶ್ರೀ ಬಾಲಾಜಿ ಫರ್ಟಿಲೈಜರ್ಸ್ ಮತ್ತು ಪೆಸ್ಟಿಸೈಡ್ ಮಳಿಗೆಯಲ್ಲಿ ರಸಗೊಬ್ಬರ ಮಾರಾಟ ಮಾಡಲು ಕೃಷಿ ಇಲಾಖೆಯಿಂದ ಪರವಾನಿಗೆ ಪಡೆದಿದ್ದು ಇತ್ತಿಚೆಗೆ ಬಿತ್ತನೆ ಕಾರ್ಯ ಪ್ರಾರಂಭವಾದ ಬಳಿಕ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಮಳಿಗೆಯಲ್ಲಿ ಮಾರಾಟ ಮಾಡುತ್ತಿರುವ ರಸಗೊಬ್ಬರದ ಪ್ರತಿ ಚೀಲಕ್ಕೆ 200 ರೂಪಾಯಿ ಹೆಚ್ಚುವರಿ

ಹಣವನ್ನು ಪಡೆಯುತ್ತಿರುವುದು ಕಂಡುಬಂದಿದ್ದು ರೈತರಿಂದ ಹೆಚ್ಚುವರಿ ಹಣ ಪಡೆಯುತ್ತಿರುವ ರಸಗೊಬ್ಬರ ಮಾರಾಟ ಮಳಿಗೆಯ ಪರವಾನಗಿ ರದ್ದು ಪಡಿಸಿ ಸಂಬಂಧ ಪಟ್ಟ ಅಂಗಡಿ ಮಳಿಗೆಯ ಮಾಲೀಕರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದರ ಜೋತೆಗೆ ಕುಣಿಗಲ್ ತಾಲ್ಲೂಕಿನಾದ್ಯಂತ ಪರವಾನಿಗೆ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿರುವ ಮಳಿಗೆಗಳ ಮುಂದೆ ದರಪಟ್ಟಿ ಹಾಗೂ ದಾಸ್ತಾನು ವಿವರಗಳನ್ನು ನಮುದಿಸಬೇಕು ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುವಂತೆ ರೈತರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ @publicnewskunigal