ಹುಲಿಯೂರುದುರ್ಗ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣ ಇಬ್ಬರು ಸಾವನಪ್ಪಿರುವ ಘಟನೆ ನಡೆದಿದೆ!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹಳೆಪೇಟೆಯಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ಮಹಿಳೆಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಠ ಮಧ್ಯೆ ಸಾವನ್ನಪ್ಪಿರುವ ಘಟನೆನಡೆದಿದೆ ಹಳೆಪೇಟೆ ನಿವಾಸಿ ನಾಗಮ್ಮ (55) ಮೃತ ಮಹಿಳೆಯಾಗಿದ್ದು ಪ್ರಕರಣ ದಾಖಲಾಗಿದೆ,ಬೆಂಗಳೂರು ಹಾಗೂ ಸೋಮವಾರಪೇಟೆ ರಾಜ್ಯ ಹೆದ್ದಾರಿ 85ರ ದೀಪಾಂಬುದ್ದಿ ಕೆರೆಯ ಬಳಿ ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮಾಗಡಿ ತಾಲ್ಲೂಕಿನ ತಗ್ಗಿಕುಪ್ಪೆ ಗ್ರಾಮದ ಧನಂಜಯ (58) ಸ್ಥಳದಲ್ಲೆ ಸಾವನ್ನಪ್ಪಿದ್ದು ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal