ಹಾಸನ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆಯ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಎಂಟು ಮಂದಿ ಸಾವು ಹಲವರ ಸ್ಥಿತಿ ಗಂಭೀರ!
ಹಾಸನದ ಜಿಲ್ಲೆಯ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಕಂಟೈನರ್ ಲಾರಿ ಹರಿದು 8 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಹಾಸನ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ ಗಣೇಶ ವಿಸರ್ಜನೆಯ ಸಂಭ್ರಮದಲ್ಲಿ ಮುಳುಗಿದ್ದ ಯುವಕರು ಡಿಜೆ ಸದ್ದಿಗೆ ಮೈ ಮರೆತು ಕುಣಿಯುತ್ತಿದ್ದವರು ಮೇಲೆ ಯಮ ಸ್ವರೂಪಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ
ರಸ್ತೆಯಲ್ಲಿ ಮೆರವಣಿಗೆಯಲ್ಲಿ ಗಣೇಶ ವಿಸರ್ಜನೆಗೆ ತೆರಳುತ್ತಿದ್ದವರ ಮೇಲೆ ನುಗ್ಗಿದೆ ನೋಡು ನೋಡುತಿದ್ದಂತೆ ಹಲವರು ಲಾರಿಯ ಕೆಳಗೆ ಸಿಲುಕಿ ಸಾವನ್ನಪ್ಪಿದರೆ ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದರು ಗಾಯಳುಗಳನ್ನು ಕೂಡಲೆ ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೇಟಿ ನೀಡಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಘಟನೆಗೆ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು ಮೃತಪಟ್ಟವರಿಗೆ ಐದು ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ @publicnewskunigal