ವಿಳಾಸ ಕೇಳುವ ನೆಪದಲ್ಲಿ ಒಂಟಿ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ದೂರು ದಾಖಲು!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹಂಗರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ರಸ್ತೆ ಬದಿಯಲ್ಲಿ ಎಮ್ಮೆಗಳನ್ನು ಮೇಯಿಸಲು ತೆರಳುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯನ್ನು ಹಿಂಬಾಲಿಸಿದ್ದಾರೆ ಗ್ರಾಮದ ಮುಖ್ಯ ರಸ್ತೆಯಿಂದ ಜಮೀನಿನ ಕಡೆಗೆ ತೆರಳುವ ರಸ್ತೆಯಲ್ಲಿ ಎಮ್ಮೆಗಳನ್ನು ಇಡಿದುಕೊಂಡು ಹೋಗುವಾಗ ಯಾರು ಇಲ್ಲದನ್ನು ಗಮನಿಸಿದ ಖದಿಮರು ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿ ಮಹಿಳೆಯ ಕತ್ತಲ್ಲಿದ್ದ ಸುಮಾರು 40 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾರೆ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ರವರ ತಾಯಿ ಶಂಕುಂತಲಮ್ಮ ಸರ ಕಳೆದುಕೊಂಡ ಮಹಿಳೆಯಾಗಿದ್ದು ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal